ಗುಜರಾತ್‌ನ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಗುಜರಾತ್‌ನ ರಾಜ್‌ಕೋಟ್ ನಗರದ ಬಳಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಿದರು.
ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ
ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ
Updated on

ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್ ನಗರದ ಬಳಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಿದರು.

ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಇಂದು ಗುಜರಾತ್‌ನ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.

ಇದು ಗುಜರಾತ್ ನ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವಾಗಿದ್ದು, 1,405 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ.

ರಾಜ್‌ಕೋಟ್‌ನಿಂದ ಸುಮಾರು 30 ಕಿಮೀ ದೂರದಲ್ಲಿರುವ ಹಿರಾಸರ್ ಗ್ರಾಮದಲ್ಲಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ, 1,500 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಿದೆ.

ಇದು 3,040 ಮೀಟರ್(3.04 ಕಿಮೀ) ಉದ್ದ ಮತ್ತು 45 ಮೀಟರ್ ಅಗಲದ ರನ್‌ವೇಯನ್ನು ಹೊಂದಿದೆ. ಇಲ್ಲಿ ಯಾವುದೇ ನಿರ್ದಿಷ್ಟ ಹಂತದಲ್ಲಿ 14 ವಿಮಾನಗಳನ್ನು ನಿಲುಗಡೆ ಮಾಡಬಹುದು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com