ಸಂಸತ್ತಿನಲ್ಲಿ ಮಾತನಾಡದ ಪ್ರಧಾನಿ ರಾಜಸ್ಥಾನದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಟೀಕೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಅವರು ಸಂಸತ್ತಿನಲ್ಲಿ ಮಾತನಾಡುವುದಿಲ್ಲ ಬದಲಿಗೆ ರಾಜಸ್ಥಾನದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಅವರು ಸಂಸತ್ತಿನಲ್ಲಿ ಮಾತನಾಡುವುದಿಲ್ಲ ಬದಲಿಗೆ ರಾಜಸ್ಥಾನದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜನರು ಈಗ ಜಾಗೃತರಾಗಿದ್ದಾರೆ ಮತ್ತು ಈ ರೀತಿಯ ರಾಜಕೀಯದ ವಿರುದ್ಧ ಹೋರಾಡುತ್ತಾರೆ ಎಂದು ಖರ್ಗೆ ಹೇಳಿದರು.

'ಇಂದು, ಜನರು ಜಾಗೃತರಾಗಿದ್ದಾರೆ ಮತ್ತು ಅವರು ಇಂತಹ ನಡೆ ವಿರುದ್ಧ ಹೋರಾಡುತ್ತಾರೆ. ಇದರರ್ಥ ನೀವು ಪ್ರಜಾಪ್ರಭುತ್ವದ ದೇವಾಲಯವಾದ ಸಂಸತ್ತಿನಲ್ಲಿ ಮಾತನಾಡಲು ಬಯಸುವುದಿಲ್ಲ ಮತ್ತು ಹೊಸ ವೈದ್ಯಕೀಯ ಕಾಲೇಜುಗಳ ಉದ್ಘಾಟನೆ ವೇಳೆ ರಾಜಸ್ಥಾನದಲ್ಲಿ ರಾಜಕೀಯ ಭಾಷಣ ಮಾಡಲು ಬಯಸುತ್ತೀರಿ' ಎಂದು ಅವರು ಹೇಳಿದರು. 

ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಮಣಿಪುರ ಹಿಂಸಾಚಾರದ ಬಗ್ಗೆ ಸಂಸತ್ತಿನಲ್ಲಿ ಮಾತನಾಡದ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

<strong>ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಎಎಪಿಯ ಸಂಜಯ್‌ ಸಿಂಗ್‌ರನ್ನು ಭೇಟಿ ಮಾಡಿದ ಮಲ್ಲಿಕಾರ್ಜುನ ಖರ್ಗೆ</strong>
ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಎಎಪಿಯ ಸಂಜಯ್‌ ಸಿಂಗ್‌ರನ್ನು ಭೇಟಿ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಮೇ 3 ರಿಂದ ಹಿಂಸಾಚಾರವನ್ನು ಕಂಡ ಈಶಾನ್ಯ ರಾಜ್ಯದ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿ ಹೇಳಿಕೆ ನೀಡಿಲ್ಲ. ಪ್ರಧಾನಿ ಈ ಬಗ್ಗೆ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ.

ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರು ಹೇಳಿಕೆ ನೀಡಬೇಕು ಮತ್ತು ನಂತರ ಮಣಿಪುರದ ಬಗ್ಗೆ ಚರ್ಚೆ ನಡೆಯಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿದ್ದು, ಸಂಸತ್ತಿನ ಉಭಯ ಸದನಗಳಲ್ಲಿ ಸುಗಮ ಕಲಾಪಕ್ಕೆ ಅಡ್ಡಿಯುಂಟಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com