ವಂದೇ ಭಾರತ್ ಎಕ್ಸ್ ಪ್ರೆಸ್
ವಂದೇ ಭಾರತ್ ಎಕ್ಸ್ ಪ್ರೆಸ್

ಆಗ್ರಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜಿಗೆ ಹಾನಿ

ಆಗ್ರಾ ರೈಲ್ವೆ ವಿಭಾಗದ ಭೋಪಾಲ್‌ನಿಂದ ದೆಹಲಿಯ ನಿಜಾಮುದ್ದೀನ್ ನಿಲ್ದಾಣದವರೆಗೆ ಸಂಚರಿಸುವ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿಗೆ ಬುಧವಾರ ಕಲ್ಲು ತೂರಾಟ ನಡೆಸಲಾಗಿದ್ದು, ರೈಲಿನ ಕೋಚ್‌ನ ಗಾಜುಗಳು ಒಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗ್ರಾ: ಆಗ್ರಾ ರೈಲ್ವೆ ವಿಭಾಗದ ಭೋಪಾಲ್‌ನಿಂದ ದೆಹಲಿಯ ನಿಜಾಮುದ್ದೀನ್ ನಿಲ್ದಾಣದವರೆಗೆ ಸಂಚರಿಸುವ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿಗೆ ಬುಧವಾರ ಕಲ್ಲು ತೂರಾಟ ನಡೆಸಲಾಗಿದ್ದು, ರೈಲಿನ ಕೋಚ್‌ನ ಗಾಜುಗಳು ಒಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೆ ಮೂಲಗಳ ಪ್ರಕಾರ, ಆಗ್ರಾ ರೈಲ್ವೆ ವಿಭಾಗದ ಮಾನಿಯಾ ಮತ್ತು ಜಜೌ ನಿಲ್ದಾಣಗಳ ನಡುವೆ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದ್ದು, ಸಿ-7 ಕೋಚ್‌ನ ಸೀಟ್ ಸಂಖ್ಯೆ 13-14 ರ ಕಿಟಕಿ ಗಾಜು ಒಡೆದಿದೆ.

ಮಾಹಿತಿ ಪಡೆದ ರೈಲ್ವೆ ತಂಡ ಸ್ಥಳಕ್ಕೆ ಆಗಮಿಸಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಆಗ್ರಾ ರೈಲ್ವೆ ವಿಭಾಗದ ಪಿಆರ್‌ಒ ಪ್ರಶಸ್ತಿ ಶ್ರೀವಾಸ್ತವ ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ.

ಕಲ್ಲು ತೂರಾಟವಾಗಿರುವುದು ಇದೇ ಮೊದಲಲ್ಲ, ಭೋಪಾಲ್‌ನಿಂದ ನಿಜಾಮುದ್ದೀನ್ ನಿಲ್ದಾಣದ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆದಿತ್ತು.

Related Stories

No stories found.

Advertisement

X
Kannada Prabha
www.kannadaprabha.com