ಅಯೋಧ್ಯೆ: ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನ ನೀಡಿದ ಟ್ರಸ್ಟ್
ಉತ್ತರಪ್ರದೇಶದ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ 2024ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿದೆ.
Published: 27th July 2023 10:50 AM | Last Updated: 27th July 2023 10:50 AM | A+A A-

ರಾಮ ಮಂದಿರ
ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ 2024ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿದೆ.
ಈ ಸಮಾರಂಭವು ಮುಂದಿನ ವರ್ಷದ ಜನವರಿ ತಿಂಗಳಲ್ಲಿ ನಡೆಯಲಿದೆ ಮತ್ತು ಸುಮಾರು 10,000 ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾತನಾಡಿ, ನಾವು ಜನವರಿ 15 ಮತ್ತು 24 ರ ನಡುವೆ ಕಾರ್ಯಕ್ರಮವನ್ನು ನಡೆಸಲು ದಿನಾಂಕಗಳನ್ನು ಗೊತ್ತು ಮಾಡಿದ್ದೇವೆ. ಆದರೂ, ಈ ಪೈಕಿ ನಿಖರವಾದ ದಿನಾಂಕವನ್ನು ಪ್ರಧಾನಿ ಮೋದಿ ನಿರ್ಧರಿಸಲಿದ್ದಾರೆ ಎಂದರು.
ಟ್ರಸ್ಟ್‌ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಸಹಿಯನ್ನು ಹೊಂದಿರುವ ಆಮಂತ್ರಣ ಪತ್ರದಲ್ಲಿ, ಪ್ರಧಾನ ಮಂತ್ರಿಗಳ ಉಪಸ್ಥಿತಿಯು ಜಾಗತಿಕ ಮಟ್ಟದಲ್ಲಿ ಭಾರತದ ಖ್ಯಾತಿಯನ್ನು ಹೆಚ್ಚಿಸುತ್ತದೆ. ಇಂತಹ ಭವ್ಯ ಸಮಾರಂಭದಲ್ಲಿ ಭದ್ರತಾ ಏಜೆನ್ಸಿಗಳು ಫೂಲ್‌ಫ್ರೂಫ್, ಅತಿಥಿ-ಆಧಾರಿತ ಭದ್ರತಾ ಉಪಕರಣವನ್ನು ರೂಪಿಸಿವೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ರಾಮ ಮಂದಿರ ಜನವರಿಯಲ್ಲಿ ಉದ್ಘಾಟನೆ; ಮೂಲಸೌಕರ್ಯ ಕಾಮಗಾರಿ ಚುರುಕು
ಅಯೋಧ್ಯೆ ಆಡಳಿತ ಮಂಡಳಿಯು ಭದ್ರತಾ ಏಜೆನ್ಸಿಗಳೊಂದಿಗೆ ಸಹಕರಿಸುತ್ತಿದೆ. ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ಸಾಧ್ಯತೆಯಿದ್ದು, ಯಾವುದೇ ತೊಂದರೆಯಾಗದಂತೆ ಕಾರ್ಯಕ್ರಮವನ್ನು ಏರ್ಪಡಿಸಬೇಕಿದೆ.
ಈ ವರ್ಷದ ಡಿಸೆಂಬರ್ ವೇಳೆಗೆ ದೇಗುಲದ ನೆಲ ಅಂತಸ್ತಿನ ಕಾರ್ಯವನ್ನು ಪೂರ್ಣಗೊಳಿಸಲು ದೇವಸ್ಥಾನದ ಟ್ರಸ್ಟ್ ಅಗತ್ಯ ಕ್ರಮ ಕೈಗೊಂಡಿದೆ. ಈ ಗುರಿಯನ್ನು ಸಾಧಿಸಲು, ಹಗಲು ರಾತ್ರಿಯೆನ್ನದೆ ಕೆಲಸ ನಡೆಯುತ್ತಿದೆ. ದೇವಾಲಯದ ಆವರಣದಲ್ಲಿ 550 ರಿಂದ ಸರಿಸುಮಾರು 1,600 ಕಾರ್ಮಿಕರು ಮತ್ತು ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ.