ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವು: 10 ಮಂದಿಗೆ ಗಾಯ
ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ನಾಲ್ವರು ಮೃತಪಟ್ಟಿದ್ದಾರೆ 10 ಮಂದಿ ಗಾಯಗೊಂಡ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
Published: 29th July 2023 12:48 PM | Last Updated: 29th July 2023 03:38 PM | A+A A-

ಮೊಹರಂ ಮೆರವಣಿಗೆ ವೇಳೆ ನಾಲ್ಕು ಸಾವು
ರಾಂಚಿ: ಇಂದು ದೇಶದ್ಯಾಂತ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಸಂಭ್ರಮದ ನಡುವೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ನಾಲ್ವರು ಮೃತಪಟ್ಟಿದ್ದಾರೆ 10 ಮಂದಿ ಗಾಯಗೊಂಡ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಖೆಟ್ಕೊ ಎನ್ನುವ ಗ್ರಾಮದಲ್ಲಿ ಮೆರವಣಿಗೆ ವೇಳೆ ಕಬ್ಬಿಣದಿಂದ ಮಾಡಿದ ಧಾರ್ಮಿಕ ಧ್ವಜವು 11 ಸಾವಿರ ವೋಲ್ಟ್‌ನ ವಿದ್ಯುತ್ ತಂತಿಗೆ ತಾಗಿದ ಕಾರಣ ದುರ್ಘಟನೆ ಸಂಭವಿಸಿದೆ ಎಂದು ಬೊಕಾರೊಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಹೇಳಿದ್ದಾರೆ.
10 ಮಂದಿಗೆ ಸುಟ್ಟಗಾಯಗಳಾಗಿವೆ. ಮೆರವಣಿಗೆಯಲ್ಲಿ ಹೊತ್ತೊಯ್ಯುತ್ತಿದ್ದ ತಾಜಿಯಾ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಈ ದುರಂತ ನಡೆದಿದೆ ಎಂದು ಹೇಳಲಾಗಿದೆ, ಇದೀಗ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಜುಲೈ 29 ರಂದು ಮೊಹರಂ: ಜನರಿಗೆ ತೊಂದರೆಯಾಗದಂತೆ ಆಚರಿಸಲು ಯುವಕರಿಗೆ ಸಮುದಾಯದ ಮುಖಂಡರ ಕರೆ
ಶನಿವಾರ ಬೆಳಿಗ್ಗೆ 6 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ, ಇನ್ನೂ ಸ್ಥಳಕ್ಕೆ ಧಾವಿಸಿದ ಬೊಕಾರೊನ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಅವರು ಈ ಬಗ್ಗೆ ತನಿಖೆ ನಡೆಸಲಾಗಿದ್ದು, ಘಟನೆಯ ಬಗ್ಗೆ ವರದಿ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಇಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಮೊಹರಂ ಮೆರವಣಿಗೆ ಪ್ರಾರಂಭವಾಗಿತ್ತು.
Jharkhand | Four people were killed and 10 suffered burn injuries when the Tazia they were carrying during the Moharram procession came in contact with a high-tension electric wire in Khetko village of Peterwar Block in Bokaro District today pic.twitter.com/6jFQsDighz
— ANI (@ANI) July 29, 2023