ಪಶ್ಚಿಮ ಬಂಗಾಳ: ಕಚ್ಚಾ ಬಾಂಬ್ ಸ್ಫೋಟ, ಒಂಬತ್ತು ವರ್ಷದ ಬಾಲಕನಿಗೆ ಗಾಯ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ನಡೆದ ಕಚ್ಚಾ ಬಾಂಬ್ ಸ್ಫೋಟದಲ್ಲಿ ಒಂಬತ್ತು ವರ್ಷದ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ನಡೆದ ಕಚ್ಚಾ ಬಾಂಬ್ ಸ್ಫೋಟದಲ್ಲಿ ಒಂಬತ್ತು ವರ್ಷದ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸಿರ್‌ಹತ್ ಬ್ಲಾಕ್ 2ರಲ್ಲಿ 4ನೇ ತರಗತಿ ವಿದ್ಯಾರ್ಥಿಯಾಗಿದ್ದ ಬಾಲಕ ಗಾಯಗೊಂಡಿದ್ದು, ಆತ ತನ್ನ ಮನೆಯ ಸಮೀಪದ ಮೈದಾನದಲ್ಲಿ ಬಿದ್ದಿದ್ದ ಕಚ್ಚಾ ಬಾಂಬ್ ಅನ್ನು ಚೆಂಡು ಎಂದು ತಪ್ಪಾಗಿ ಗ್ರಹಿಸಿ ಸ್ಪರ್ಶಿಸಿದ್ದಾನೆ. ಈ ವೇಳೆ ಬಾಂಬ್ ಸ್ಫೋಟಗೊಂಡು ಆತನಿಗೆ ಗಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಾಲಕನನ್ನು ಬಸಿರ್‌ಹತ್‌ನ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆತನ ಪರಿಸ್ಥಿತಿ ಗಂಭೀರವಾಗಿದ್ದರಿಂದ ಆತನನ್ನು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ಬಗ್ಗೆ ಮಾಹಿತಿ ಪಡೆದ ತಂಡವು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟದಲ್ಲಿ ಬಾಲಕನ ಬಲಗೈಗೆ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com