ಚಲಿಸುತ್ತಿದ್ದ ಜೈಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ: ಎಎಸ್ ಐ ಸೇರಿ ಮೂವರು ಪ್ರಯಾಣಿಕರು ದುರ್ಮರಣ

ಚಲಿಸುತ್ತಿದ್ದ ರೈಲಿನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಪ್ರಯಾಣಿಕರು ದುರ್ಮರಣಕ್ಕೀಡಾದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಹಾರಾಷ್ಟ್ರ : ಚಲಿಸುತ್ತಿದ್ದ ರೈಲಿನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಪ್ರಯಾಣಿಕರು ದುರ್ಮರಣಕ್ಕೀಡಾದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಬಳಿ ನಡೆದಿದೆ.

ಮಹಾರಾಷ್ಟ್ರದ ಪಾಲ್ಘರ್ ಬಳಿ ಚಲಿಸುತ್ತಿದ್ದ ಜೈಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ ನಡೆದಿದ್ದು, ಆರ್ ಪಿಎಫ್ ಎಎಸ್ ಐ ಸೇರಿ ನಾಲ್ವರು  ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ರೈಲು ಮುಂಬೈಗೆ ತೆರಳುತ್ತಿದ್ದಾಗ ಆರ್ ಪಿಎಫ್ ಸೈನಿಕ  ಫೈರಿಂಗ್ ಮಾಡಿದ್ದಾನೆ  ಎಂದು ತಿಳಿದು ಬಂದಿದೆ. ಗುಂಡಿನ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ರೈಲು ಜೈಪುರದಿಂದ ಮುಂಬಯಿ ಕಡೆಗೆ ಸಂಚರಿಸುತ್ತಿತ್ತು.

ರೈಲ್ವೇ ರಕ್ಷಣಾ ಪಡೆಯ ಕಾನ್​ಸ್ಟೆಬಲ್ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ವಾಪಿಯಿಂದ ಬೊರಿವಲಿಯಿಂದ ಮೀರಾ ರೋಡ್ ನಿಲ್ದಾಣದ ನಡುವೆ ಈ ಘಟನೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com