ನರೇಂದ್ರ ಮೋದಿ ನೇತೃತ್ವದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಗೆಲ್ಲಲಿದೆ: ನಿತಿನ್ ಗಡ್ಕರಿ
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
Published: 01st June 2023 03:36 PM | Last Updated: 01st June 2023 03:36 PM | A+A A-

ನಿತಿನ್ ಗಡ್ಕರಿ
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
'ಟೈಮ್ಸ್ ನೆಟ್‌ವರ್ಕ್ ಇಂಡಿಯಾ ಎಕನಾಮಿಕ್ ಕಾನ್‌ಕ್ಲೇವ್' ಅನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಕಳೆದ ಒಂಬತ್ತು ವರ್ಷಗಳಲ್ಲಿ ಸರ್ಕಾರವು ದೇಶದ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡಿದೆ. ಬಡತನವನ್ನು ನಿರ್ಮೂಲನೆ ಮಾಡಲು ಮತ್ತು ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಪ್ರಧಾನಿಯವರ ಗುರಿಯನ್ನು ಸಾಧಿಸಲು ಉದ್ಯೋಗವನ್ನು ಸೃಷ್ಟಿಸುವ ಅವಶ್ಯಕತೆಯಿದೆ ಎಂದು ಹೇಳಿದರು.
'2024 ಹಮ್ ಜಿತ್ನೆ ವಾಲೆ ಹೈ (ನಾವು 2024 ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ). 'ನಾವು ಉತ್ತಮ ಕೆಲಸ ಮಾಡಿದ್ದೇವೆ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸುತ್ತೇವೆ. ದೇಶದ ಅಭಿವೃದ್ಧಿಗಾಗಿ ಜನರು ನಮ್ಮನ್ನು ಆಯ್ಕೆ ಮಾಡುತ್ತಾರೆ ಎಂದು ರಸ್ತೆ ಸಾರಿಗೆ ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 543 ಸ್ಥಾನಗಳಲ್ಲಿ 303 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 52 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ಭಾರತದ ದೊಡ್ಡ ಸಮಸ್ಯೆಗಳೆಂದರೆ ಹಸಿವು, ಬಡತನ ಮತ್ತು ನಿರುದ್ಯೋಗ ಎಂದು ಸಚಿವರು ಹೇಳಿದರು.
ಹಸಿರು ಜಲಜನಕ, ಎಲ್‌ಎನ್‌ಜಿ ಮತ್ತು ವಿದ್ಯುತ್‌ನಂತಹ ಶುದ್ಧ ಇಂಧನದಲ್ಲಿ ಕಾರ್ಯನಿರ್ವಹಿಸುವ ನಿರ್ಮಾಣ ಉಪಕರಣಗಳಿಗೆ ಅಗ್ಗದ ದರದಲ್ಲಿ ಸಾಲ ನೀಡಲು ಚಿಂತನೆ ನಡೆಸುತ್ತಿದ್ದೇನೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ನಿರ್ಮಾಣ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದರು.
ಪ್ರಸ್ತುತ, ನಿರ್ಮಾಣ ಉಪಕರಣಗಳು ಡೀಸೆಲ್ ಮೂಲಕ ಕಾರ್ಯನಿರ್ವಹಿಸುತ್ತಿವೆ. ಅವುಗಳು ಹಸಿರು ಜಲಜನಕ, ಎಲ್‌ಎನ್‌ಜಿ ಮತ್ತು ವಿದ್ಯುತ್‌ನಲ್ಲಿ ಕಾರ್ಯನಿರ್ವಹಿಸಬೇಕೆಂದು ನಾನು ಬಯಸುತ್ತೇನೆ. ಹೀಗಾಗಿ, ಕಡಿಮೆ ದರದಲ್ಲಿ ಸಾಲವನ್ನು (ಶುದ್ಧ ಇಂಧನದಿಂದ ಚಲಿಸುವ ನಿರ್ಮಾಣ ಉಪಕರಣಗಳು) ಒದಗಿಸುವ ನೀತಿಯನ್ನು ಹೊರತರಲು ಯೋಚಿಸುತ್ತಿದ್ದೇನೆ ಎಂದು ಹೇಳಿದರು.
ಹಣಕಾಸು ಲೆಕ್ಕ ಪರಿಶೋಧನೆಗಿಂತ ಕಾರ್ಯಕ್ಷಮತೆಯ ಲೆಕ್ಕಪರಿಶೋಧನೆ ಮುಖ್ಯವಾಗಿದೆ ಎಂದು ಅವರು ಹೇಳಿದರು.