ಜೂನ್ 12 ರಂದು ನಿತೀಶ್ ಕುಮಾರ್ ಕರೆದಿರುವ ಪ್ರತಿಪಕ್ಷಗಳ ಸಭೆಯಲ್ಲಿ ಉದ್ಧವ್ ಠಾಕ್ರೆ ಭಾಗಿ
ಜೂನ್ 12 ರಂದು ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕರೆದಿರುವ ಪ್ರಮುಖ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಪಾಲ್ಗೊಳ್ಳಲಿದ್ದಾರೆ ಎಂದು ಠಾಕ್ರೆ ಪಕ್ಷದ ನಾಯಕ ಸಂಜಯ್...
Published: 01st June 2023 11:20 AM | Last Updated: 01st June 2023 11:20 AM | A+A A-

ನಿತೀಶ್ ಕುಮಾರ್ - ಉದ್ಧವ್ ಠಾಕ್ರೆ
ಮುಂಬೈ: ಜೂನ್ 12 ರಂದು ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕರೆದಿರುವ ಪ್ರಮುಖ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಪಾಲ್ಗೊಳ್ಳಲಿದ್ದಾರೆ ಎಂದು ಠಾಕ್ರೆ ಪಕ್ಷದ ನಾಯಕ ಸಂಜಯ್ ರಾವತ್ ಅವರು ಗುರುವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, "ಎಲ್ಲಾ ಸಮಾನ ಮನಸ್ಕ ಪಕ್ಷಗಳು ಒಗ್ಗೂಡುತ್ತಿವೆ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ. ಉದ್ಧವ್ ಠಾಕ್ರೆ ಪಾಟ್ನಾದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಪ್ರತಿಪಕ್ಷಗಳು ಒಗ್ಗೂಡಿದರೆ ಬಿಜೆಪಿ ಸೋಲಿಸಬಹುದು: ರಾಹುಲ್ ಗಾಂಧಿ
ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರತಿಪಕ್ಷಗಳ ಎಲ್ಲಾ ಪ್ರಮುಖ ನಾಯಕರನ್ನು ಆಹ್ವಾನಿಸಿದ್ದಾರೆ. 2024 ರಲ್ಲಿ ಬದಲಾವಣೆಯನ್ನು ಬಯಸುವ ಎಲ್ಲಾ ದೇಶಪ್ರೇಮಿ ಪಕ್ಷಗಳು ಜೂನ್ 12 ರಂದು ಪಾಟ್ನಾಗೆ ಹೋಗುತ್ತವೆ. ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಸಹ ಆಹ್ವಾನಿಸಲಾಗಿದೆ. ನಾವು ಪಾಟ್ನಾಗೆ ಹೋಗಲು ಯೋಚಿಸುತ್ತಿದ್ದೇವೆ ಎಂದರು.
2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಎದುರಿಸಲು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿರುವ ನಿತೀಶ್ ಕುಮಾರ್ ಅವರು, ದೇಶದ ವಿರೋಧ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.