ತೆಲಂಗಾಣ ಸಂಸ್ಥಾಪನಾ ದಿನ: ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್'ಗೆ ಆಹ್ವಾನ ನೀಡದ ಸರ್ಕಾರ!

ಪ್ರತ್ಯೇಕ ರಾಜ್ಯವಾಗಿ ಉದಯಿಸಿದ ತೆಲಂಗಾಣ 10ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರಿಗೆ ಆಹ್ವಾನವನ್ನೇ ನೀಡಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.
ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್
ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್

ಹೈದರಾಬಾದ್: ಪ್ರತ್ಯೇಕ ರಾಜ್ಯವಾಗಿ ಉದಯಿಸಿದ ತೆಲಂಗಾಣ 10ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರಿಗೆ ಆಹ್ವಾನವನ್ನೇ ನೀಡಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.

1969 ರಿಂದಲೂ ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ಅನೇಕ ಹೋರಾಟಗಳು ನಡೆಯುತ್ತಿದ್ದವು. ನಿರಂತರ ಹೋರಾಟದಲ್ಲಿ ಅನೇಕರು ಪ್ರಾಣತೆತ್ತಿದ್ದರು. ಕೊನೆಗೂ ಜೂನ್​ 2, 2014 ರಲ್ಲಿ ಭಾರತದ 29 ನೇ ರಾಜ್ಯವಾಗಿ ತೆಲಂಗಾಣ ಉದಯಿಸಿತು.

2014 ರಲ್ಲಿ ಆಂಧ್ರಪ್ರದೇಶವನ್ನು ರಾಜ್ಯ ಎರಡು ಭಾಗಗಳಾಗಿ ವಿಂಗಡಿಸಲಾಯಿತು. ಈ ವೇಳೆ ತೆಲಂಗಾಣ ಪ್ರತ್ಯೇಕ ರಾಜ್ಯವಾಗಿ ರಚನೆಯಾಯಿತು. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜೂನ್ 2 ರಂದು ತೆಲಂಗಾಣ ರಾಜ್ಯ ರಚನೆ ದಿನವಾಗಿ ಆಚರಿಸಲಾಗುತ್ತಿದೆ.

9 ದಶಕಗಳನ್ನು ಪೂರೈಸಿರುವ ರಾಜ್ಯ ಇದೀಗ ಹತ್ತನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಅದ್ಧೂರಿ ದಶಮಾನೋತ್ಸವ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ. ಮೂರು ವಾರಗಳ ಕಾಲ ವಿಶೇಷ ಆಚರಣೆಗೆ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಅನುದಾನವನ್ನೂ ಬಿಡುಗಡೆ ಮಾಡಿದೆ.

ಇದರ ನಡುವೆ ದಶಮಾನೋತ್ಸವ ದಿನಾಚರಣೆಗೆ ರಾಜ್ಯಪಾಲರಿಗೆ ಆಹ್ವಾನ ನೀಡದಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಅಸಮಧಾನಗೊಂಡಿರುವ ಸೌಂದರರಾಜನ್ ಅವರು, ಕೇವಲ ರಾಜ್ಯಪಾಲರ ಭವನದ ಕಾರ್ಯಕ್ರಮಗಳಲ್ಲಿ ಮಾತ್ರ ಭಾಗವಹಿಸಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com