ಬ್ರಿಜ್ ಭೂಷಣ್ ಶರಣ್ ಸಿಂಗ್
ಬ್ರಿಜ್ ಭೂಷಣ್ ಶರಣ್ ಸಿಂಗ್

ಬ್ರಿಜ್ ಭೂಷಣ್ ಅಯೋಧ್ಯೆ ರ್ಯಾಲಿಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಯೋಜಿಸಿದ್ದ ಅಯೋಧ್ಯೆ ರ್ಯಾಲಿಗೆ ಅನುಮತಿ ನೀಡಲು...

ಲಖನೌ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಯೋಜಿಸಿದ್ದ ಅಯೋಧ್ಯೆ ರ್ಯಾಲಿಗೆ ಅನುಮತಿ ನೀಡಲು ಉತ್ತರ ಪ್ರದೇಶ ಸರ್ಕಾರ ನಿರಾಕರಿಸಿದೆ.

ಈ ಹಿನ್ನೆಲೆಯಲ್ಲಿ ಆರೋಪಿ ಬ್ರಿಜ್ ಭೂಷಣ್ ಅವರು ಅಯೋಧ್ಯೆಯಲ್ಲಿ ತನ್ನ ಬೆಂಬಲಕ್ಕಾಗಿ ಆಯೋಜಿಸಿದ್ದ ರ್ಯಾಲಿಯನ್ನು ಕೆಲವು ದಿನಗಳ ಕಾಲ ಮುಂದೂಡಿದ್ದಾರೆ.

ಅಯೋಧ್ಯೆಯಲ್ಲಿ "ಸಾಧುಗಳ ಆಶೀರ್ವಾದದೊಂದಿಗೆ" ಸೋಮವಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವುದಾಗಿ ಬ್ರಿಜ್ ಭೂಷಣ್ ಸಿಂಗ್ ಈ ಹಿಂದೆ ಘೋಷಿಸಿದ್ದರು.

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ನ ವಿವರಗಳು ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ಸಂಸದ ಅಯೋಧ್ಯ ರ್ಯಾಲಿ ರದ್ದುಗೊಳಿಸಿದ ಹೇಳಿಕೆ ನೀಡಿದ್ದಾರೆ.

ಇದೇ ವೇಳೆ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ ಬ್ರಿಜ್ ಭೂಷಣ್, ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯ ವಿರೋಧಿಗಳು ನನ್ನ ವಿರುದ್ಧ "ಸುಳ್ಳು ಆರೋಪ" ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com