ಬಾಲಸೋರ್ ರೈಲು ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ

ಒಡಿಶಾದ ಬಾಲಸೋರ್ ನಲ್ಲಿ ರೈಲುಗಳ ನಡುವೆ ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಶನಿವಾರ ಆದೇಶಿಸಿದೆ.
ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

ಬಾಲಸೋರ್: ಒಡಿಶಾದ ಬಾಲಸೋರ್ ನಲ್ಲಿ ರೈಲುಗಳ ನಡುವೆ ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಶನಿವಾರ ಆದೇಶಿಸಿದೆ.

ದುರ್ಘಟನೆ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು, ಸ್ಥಳ ಪರಿಶೀನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇದೊಂದು ದೊಡ್ಡ ದುರಂತ. ರೈಲ್ವೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಗಾಯಾಳುಗಳಿಗೆ ಅತ್ಯುತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈಗಾಗಲೇ ಮೃತರಿಗೆ ಹಾಗೂ ಗಾಯಾಳುಗಳಿಗೆ ನಿನ್ನೆ ಪರಿಹಾರ ಘೋಷಣೆ ಮಾಡಲಾಗಿದೆ. ಉನ್ನತ ಮಟ್ಟದ ತನಿಖೆಗೂ ಆದೇಶಿಸಲಾಗಿದ್ದು, ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

ಪ್ರಸ್ತುತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುವುದು ನಮ್ಮ ಆದ್ಯತೆಯಾಗಿದೆ. ಜಿಲ್ಲಾಡಳಿತದ ಅನುಮೋದನೆಯ ನಂತರ ಪುನಃಸ್ಥಾಪನೆ ಕಾರ್ಯವನ್ನೂ ಆರಂಭಿಸಲಾಗುತ್ತದೆ. ಘಟನೆ ಸಂಬಂಧ ವಿವರವಾದ ಉನ್ನತ ಮಟ್ಟದ ತನಿಖೆಯನ್ನು ಕೈಗೊಳ್ಳಲಾಗುತ್ತಿದೆ. ಹಾಗೆಯೇ ರೈಲು ಸುರಕ್ಷತಾ ಆಯುಕ್ತರಿಂದ ಸ್ವತಂತ್ರ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

ಈ ನಡುವೆ ಘಟನಾ ಸ್ಥಳಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರೂ ಕೂಡ ಭೇಟಿ ನೀಡಿದ್ದು, ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com