ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಭದ್ರತಾ ವ್ಯವಸ್ಥೆ ಮಾಡಿದ್ದೇವೆ: ಕಟಕ್ ಡಿಸಿಪಿ

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿದ ನಂತರ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಎಲ್ಲಾ ಭದ್ರತಾ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಕಟಕ್‌ನ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಶನಿವಾರ ಹೇಳಿದ್ದಾರೆ.
ಒಡಿಶಾದಲ್ಲಿ ಭೀಕರ ಅಪಘಾತ
ಒಡಿಶಾದಲ್ಲಿ ಭೀಕರ ಅಪಘಾತ

ಕಟಕ್: ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿದ ನಂತರ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಎಲ್ಲಾ ಭದ್ರತಾ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಕಟಕ್‌ನ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಶನಿವಾರ ಹೇಳಿದ್ದಾರೆ.

ಘಟನೆ ಕುರಿತು ಎಎನ್‌ಐ ಜೊತೆ ಮಾತನಾಡಿದ ಕಟಕ್ ಡಿಸಿಪಿ, ಬಾಲಸೋರ್ ರೈಲು ಡಿಕ್ಕಿಯ ಸಂತ್ರಸ್ತರನ್ನು ಕಟಕ್‌ನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು. ಕಟಕ್‌ನ ಸಂಪೂರ್ಣ ತಂಡವು ಸಿದ್ಧವಾಗಿದೆ ಮತ್ತು ಗಾಯಾಳುಗಳನ್ನು ದಾಖಲಿಸಲು ಪೂರ್ವ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಕಟಕ್‌ನಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಇರುವುದರಿಂದ ಹೆಚ್ಚಿನ ಗಾಯಾಳುಗಳನ್ನು ಇಲ್ಲಿಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಕಟಕ್‌ನ ಸಂಪೂರ್ಣ ತಂಡ ಸಿದ್ಧವಾಗಿದೆ. ಇಲ್ಲಿಗೆ ಬರುವ ಗಾಯಾಳುಗಳು ಯಾವುದೇ ತೊಂದರೆಯಿಲ್ಲದೆ ದಾಖಲಾಗುವಂತೆ ನಾವು ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು 200 ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಲವಾರು ಬೋಗಿಗಳು ಒಡಿಶಾದ ಬಾಲಸೋರ್‌ನ ಬಹನಾಗ ನಿಲ್ದಾಣದ ಬಳಿ ಮತ್ತೊಂದು ಪ್ರಯಾಣಿಕ ಮತ್ತು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಹಳಿತಪ್ಪಿದವು.

'ಅಪಘಾತವು ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಒಂದು ಗೂಡ್ಸ್ ರೈಲು ಸೇರಿದಂತೆ ಮೂರು ರೈಲುಗಳನ್ನು ಒಳಗೊಂಡಿತ್ತು' ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ಹೇಳಿದ್ದಾರೆ.

ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಪ್ರಕಾರ, ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

'ರಾತ್ರಿ 7 ಗಂಟೆ ಸುಮಾರಿಗೆ, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ನ 10-12 ಬೋಗಿಗಳು ಬಾಲೇಶ್ವರದ ಬಳಿ ಹಳಿತಪ್ಪಿ ಎದುರಿನ ಹಳಿಯಲ್ಲಿ ಬಿದ್ದವು. ಸ್ವಲ್ಪ ಸಮಯದ ನಂತರ, ಯಶವಂತಪುರದಿಂದ ಹೌರಾಕ್ಕೆ ಪ್ರಯಾಣಿಸುತ್ತಿದ್ದ ಮತ್ತೊಂದು ಪ್ಯಾಸೆಂಜರ್ ರೈಲು ಹಳಿತಪ್ಪಿದ್ದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಆ ರೈಲಿನ ಮೂರ್ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com