ಒಡಿಶಾ ರೈಲು ದುರಂತ: ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು

ಇದುವರೆಗೆ 275 ಮಂದಿಯನ್ನು ಬಲಿ ಪಡೆದಿರುವ ಒಡಿಶಾದ ಬಾಲಸೋರ್ ರೈಲು ಅಪಘಾತ ಕುರಿತು ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ.
ಒಡಿಶಾ ರೈಲು ದುರಂತದ ಚಿತ್ರ
ಒಡಿಶಾ ರೈಲು ದುರಂತದ ಚಿತ್ರ

ಭುವನೇಶ್ವರ: ಇದುವರೆಗೆ 275 ಮಂದಿಯನ್ನು ಬಲಿ ಪಡೆದಿರುವ ಒಡಿಶಾದ ಬಾಲಸೋರ್ ರೈಲು ಅಪಘಾತ ಕುರಿತು ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ.

275 ಜನರ ಸಾವಿಗೆ ಕಾರಣವಾದ ಮತ್ತು 1,000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ತ್ರಿವಳಿ ರೈಲು ಅಪಘಾತದ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದೇವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಸಂಜೆ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಒಡಿಶಾ ರೈಲು ಅಪಘಾತ: ರಾಶಿ-ರಾಶಿ ಹೆಣಗಳ ಮಧ್ಯೆ ಪ್ರೀತಿಪಾತ್ರರ ಹುಡುಕುವುದೇ ದೊಡ್ಡ ಸವಾಲು
ಬಾಲಸೋರ್, ಕಟಕ್ ಮತ್ತು ಭುವನೇಶ್ವರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳಿಗೆ ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಎಲ್ಲಾ ನೆರವು ನೀಡುತ್ತಿದೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿದೆ, ಹಗಲು-ರಾತ್ರಿ ರೋಗಿಗಳನ್ನು ನೋಡಿಕೊಳ್ಳುವ ವೈದ್ಯರ ತಂಡಗಳಿವೆ ಎಂದು ವೈಷ್ಣವ್ ಹೇಳಿದರು.

ಮೃತರ ಕುಟುಂಬದವರನ್ನು ಸಂಪರ್ಕಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಮೃತರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಿದ್ದೇವೆ" ಎಂದು ಸಚಿವರು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com