ಒಂದು ಗಂಟೆಗೂ ಅಧಿಕ ಸಮಯ ಕುಸ್ತಿಪಟುಗಳೊಂದಿಗೆ ನಡೆದ ಸಭೆಯಲ್ಲಿ ಅಮಿತ್ ಶಾ ಹೇಳಿದ್ದೇನೆಂದರೆ...

ಡಬ್ಲ್ಯುಎಫ್ಐ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರಮಾನ್ಯ ಕುಸ್ತಿಪಟುಗಳು ನೆನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ- ಪ್ರತಿಭಟನಾ ನಿರತ ಕುಸ್ತಿಪಟುಗಳು
ಕೇಂದ್ರ ಗೃಹ ಸಚಿವ ಅಮಿತ್ ಶಾ- ಪ್ರತಿಭಟನಾ ನಿರತ ಕುಸ್ತಿಪಟುಗಳು

ನವದೆಹಲಿ: ಡಬ್ಲ್ಯುಎಫ್ಐ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರಮಾನ್ಯ ಕುಸ್ತಿಪಟುಗಳು ನೆನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.
 
ಖಾಸಗಿ ಸುದ್ದಿ ವಾಹಿನಿಗೆ ಈ ಬಗ್ಗೆ ಹೇಳಿಕೆ ನೀಡಿರುವ ಒಲಂಪಿಯನ್ ಭಜರಂಗ್ ಪುನಿಯಾ, ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ  ಬ್ರಿಜ್ ಭೂಷಣ್ ಸಿಂಗ್ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಗೃಹ ಸಚಿವರ ಬಳಿ ಆಗ್ರಹಿಸಿರುವುದಾಗಿ ತಿಳಿಸಿದ್ದಾರೆ. ಗೃಹ ಸಚಿವರೊಂದಿಗಿನ ಸಭೆಯಲ್ಲಿ ಪುನಿಯಾ, ಸಾಕ್ಷಿ ಮಲ್ಲೀಕ್, ಸಂಗೀತಾ ಫೊಗಟ್ ಹಾಗೂ ಸತ್ಯವಾರ್ತ್ ಕಡಿಯಾನ್ ಅವರೂ ಇದ್ದರು.

ಕುಸ್ತಿಪಟುಗಳ ಮನವಿಯನ್ನು ಆಲಿಸಿದ ಗೃಹ ಸಚಿವ ಅಮಿತ್ ಶಾ ಅವರು ಕಾನೂನು ಎಲ್ಲರಿಗೂ ಸಮಾನವಾಗಿದ್ದು, ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ ಎಂದು ಹೇಳಿದ್ದಾರೆ. 

ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ಸರ್ಕಾರಕ್ಕೆ ನೀಡಿದ್ದ 5 ದಿನಗಳ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಅಮಿತ್ ಶಾ ಅವರ ಭೇಟಿಗೆ ಸಮಯ ಕೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com