ಒಡಿಶಾ ರೈಲು ಅಪಘಾತ: ಪಶ್ಚಿಮ ಬಂಗಾಳ ಸರ್ಕಾರದಿಂದ ಮೃತರ ಸಂಬಂಧಿಕರಿಗೆ ಸರ್ಕಾರಿ ನೌಕರಿ

ಕಳೆದ ಶುಕ್ರವಾರ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ತ್ರಿವಳಿ ಭೀಕರ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಘೋಷಿಸಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತಾ: ಕಳೆದ ಶುಕ್ರವಾರ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ತ್ರಿವಳಿ ಭೀಕರ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಘೋಷಿಸಿದ್ದಾರೆ.

ಭೀಕರ ಅಪಘಾತದಲ್ಲಿ ಕೈಕಾಲು ಕಳೆದುಕೊಂಡವರ ಸಂಬಂಧಿಕರಿಗೂ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.

ಕೋರಮಂಡಲ್ ಎಕ್ಸ್‌ಪ್ರೆಸ್‌ನಲ್ಲಿದ್ದ ಮತ್ತು ಪ್ರಸ್ತುತ ಮಾನಸಿಕ ಮತ್ತು ದೈಹಿಕ ಆಘಾತದಿಂದ ಬಳಲುತ್ತಿರುವವರಿಗೆ ತಮ್ಮ ಸರ್ಕಾರ ನಗದು ಸಹಾಯ ನೀಡಲಿದೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.

ವಿವಿಧ ಆಸ್ಪತ್ರೆಗಳಲ್ಲಿ ಚೇತರಿಸಿಕೊಳ್ಳುತ್ತಿರುವ ಗಾಯಗೊಂಡ ಪ್ರಯಾಣಿಕರನ್ನು ಭೇಟಿ ಮಾಡಲು ಮಮತಾ ಬ್ಯಾನರ್ಜಿ ಅವರು ಮಂಗಳವಾರ ಭುವನಸರ್ ಮತ್ತು ಕಟಕ್‌ಗೆ ಭೇಟಿ ನೀಡುತ್ತಿದ್ದಾರೆ.

ಪ್ರಸ್ತುತ ಗಾಯಗೊಂಡ ಪಶ್ಚಿಮ ಬಂಗಾಳದ 206 ಪ್ರಯಾಣಿಕರು ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com