ದೇಶ
ರಾಯ್ ಹತ್ಯೆ ಪ್ರಕರಣ: ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ
1991ರಲ್ಲಿ ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಆರೋಪಿ ಮುಕ್ತಾರ್ ಅನ್ಸಾರಿಗೆ ವಾರಣಾಸಿಯ ಎಂಪಿ, ಎಂಎಲ್ಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.
ವಾರಣಾಸಿ: 1991ರಲ್ಲಿ ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಆರೋಪಿ ಮುಕ್ತಾರ್ ಅನ್ಸಾರಿಗೆ ವಾರಣಾಸಿಯ ಎಂಪಿ, ಎಂಎಲ್ಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಉತ್ತರ ಪ್ರದೇಶದ ವಾರಾಣಸಿಯ ಸಂಸದರ-ಶಾಸಕರ ವಿಶೇಷ ನ್ಯಾಯಾಲಯ, ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ದರೋಡೆಕೋರ-ರಾಜಕಾರಣಿ ಮುಕ್ತಾರ್ ಅನ್ಸಾರಿ ಅಪರಾಧಿ ಎಂದು ಇಂದು ಬೆಳಗ್ಗೆ ತೀರ್ಪು ನೀಡಿತ್ತು.
ಇಂದು ಮಧ್ಯಾಹ್ನ 2 ಗಂಟೆಯ ನಂತರ ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಾಲಯ, ಮುಕ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ನೀಡಿದೆ ಎಂದು ವಕೀಲ ವಿಕಾಶ್ ಸಿಂಗ್ ಅವರು ತಿಳಿಸಿದ್ದಾರೆ.
ಆಗಸ್ಟ್ 3, 1991ರಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ ಅವರನ್ನು ವಾರಾಣಸಿಯ ಅಜಯ್ ರಾವ್ ಮನೆ ಎದುರೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.