'ನಮ್ಮ ಜವಾಬ್ದಾರಿ ಇನ್ನೂ ಮುಗಿದಿಲ್ಲ, ನಾಪತ್ತೆಯಾದವರ ಪತ್ತೆ ಹಚ್ಚುವುದು ಮುಖ್ಯವಾಗಿದೆ': ರೈಲ್ವೆ ಸಚಿವ ಅಶ್ವಿನ್ ವೈಷ್ಣವ್
ಜೂನ್ 2 ರಂದು ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಮೂರು ರೈಲುಗಳ ಭೀಕರ ಅಪಘಾತದ ನಂತರ ನಾಪತ್ತೆಯಾದವರ ಕುಟುಂಬ ಸದಸ್ಯರನ್ನು ಆದಷ್ಟು ಬೇಗ ಪತ್ತೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
Published: 05th June 2023 12:30 PM | Last Updated: 05th June 2023 07:18 PM | A+A A-

ಬಾಲಸೋರೆಯ ಬಹನಾಗ ಬಜಾರ್ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲು ಹೊರಟಾಗ ಕೈಬೀಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್
ಬಾಲಸೋರ್(ಒಡಿಶಾ): ಜೂನ್ 2 ರಂದು ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಮೂರು ರೈಲುಗಳ ಭೀಕರ ಅಪಘಾತದ ನಂತರ ನಾಪತ್ತೆಯಾದವರ ಕುಟುಂಬ ಸದಸ್ಯರನ್ನು ಆದಷ್ಟು ಬೇಗ ಪತ್ತೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಅಪಘಾತವಾದ 51 ಗಂಟೆಗಳ ನಂತರ ಬಾಲಸೋರ್ ನ ಬಹನಾಗದಲ್ಲಿ ಪ್ರಯಾಣಿಕ ರೈಲು ಸಂಚಾರ ಪುನಾರಂಭಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಪತ್ತೆಯಾದವರ ಕುಟುಂಬದ ಎಲ್ಲ ಸದಸ್ಯರನ್ನು ಆದಷ್ಟು ಬೇಗ ಪತ್ತೆ ಹಚ್ಚುವುದು ನಮ್ಮ ಉದ್ದೇಶವಾಗಿದೆ. ನಮ್ಮ ಜವಾಬ್ದಾರಿ ಇನ್ನೂ ಮುಗಿದಿಲ್ಲ ಎಂದು ಭಾವುಕರಾಗಿ ನುಡಿದರು.
Train movement on both Up & Down Main line has resumed within 51 hours of train derailment at Bahanga Bazar, Odisha. pic.twitter.com/vdpmFpjLn3
— Ministry of Railways (@RailMinIndia) June 4, 2023
ಬಾಲಸೋರ್‌ನಲ್ಲಿ ಅಪಘಾತ ಸಂಭವಿಸಿದ ನಂತರ ನಿನ್ನೆ ಭಾನುವಾರ ರಾತ್ರಿ 10.40 ರ ಸುಮಾರಿಗೆ ತನ್ನ ಪ್ರಯಾಣವನ್ನು ಪ್ರಾರಂಭಿಸಿತು ರೈಲು ಅಪಘಾತದಲ್ಲಿ 275 ಜನರು ಬಲಿಯಾಗಿದ್ದರು.
ಇದನ್ನೂ ಓದಿ: ಒಡಿಶಾ: ಅಪಘಾತದ 51 ಗಂಟೆಗಳ ನಂತರ ಬಾಲಸೋರ್ ನಲ್ಲಿ ರೈಲು ಸಂಚಾರ ಆರಂಭ; ಕೈ ಮುಗಿದ ಸಚಿವ ಅಶ್ವಿನ್ ವೈಷ್ಣವ್
ಅಪಘಾತದ ನಂತರ ಕಲ್ಲಿದ್ದಲು ಸಾಗಿಸುವ ರೈಲು ವೈಜಾಗ್ ಬಂದರಿನಿಂದ ರೂರ್ಕೆಲಾ ಸ್ಟೀಲ್ ಪ್ಲಾಂಟ್ ಕಡೆಗೆ ಹೋದರೆ ಬೆಂಗಳೂರು-ಹೌರಾ ರೈಲು ಶುಕ್ರವಾರ ದುರಂತವನ್ನು ಎದುರಿಸಿದ ಅದೇ ಟ್ರ್ಯಾಕ್‌ನಲ್ಲಿ ಚಲಿಸುತ್ತಿದೆ.