ಮಣಿಪುರ: ಲೂಟಿ ಮಾಡಿದ್ದ 790 ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಭದ್ರತಾ ಪಡೆ

ಮಣಿಪುರದ ಭದ್ರತಾ ಪಡೆಗಳು ಮೇ 3 ರಂದು ಭುಗಿಲೆದ್ದ ಜನಾಂಗೀಯ ಗಲಭೆಯ ಸಂದರ್ಭದಲ್ಲಿ ಪೊಲೀಸರು ಮತ್ತು ಇತರ ಸಂಸ್ಥೆಗಳಿಂದ ಲೂಟಿ ಮಾಡಿದ 790 ಅತ್ಯಾಧುನಿಕ ಮತ್ತು ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು 10,648 ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲೂಟಿಯಾಗಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವ ಭದ್ರತಾ ಪಡೆ
ಲೂಟಿಯಾಗಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವ ಭದ್ರತಾ ಪಡೆ
Updated on

ಇಂಫಾಲ: ಮಣಿಪುರದ ಭದ್ರತಾ ಪಡೆಗಳು ಮೇ 3 ರಂದು ಭುಗಿಲೆದ್ದ ಜನಾಂಗೀಯ ಗಲಭೆಯ ಸಂದರ್ಭದಲ್ಲಿ ಪೊಲೀಸರು ಮತ್ತು ಇತರ ಸಂಸ್ಥೆಗಳಿಂದ ಲೂಟಿ ಮಾಡಿದ 790 ಅತ್ಯಾಧುನಿಕ ಮತ್ತು ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು 10,648 ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಮಧ್ಯೆ, ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹಲವಾರು ಹಿಂಸಾಚಾರದ ಘಟನೆಗಳ ವರದಿಗಳಿವೆ. ಆದರೆ, ಅಧಿಕೃತ ದೃಢೀಕರಣಗಳು ಇನ್ನೂ ಬಂದಿಲ್ಲ.

ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಕನಿಷ್ಠ ಮೂವರನ್ನು ಜೀವಂತವಾಗಿ ಸುಟ್ಟು ಅಥವಾ ಹೊಡೆದು ಕೊಂದಿದ್ದಾರೆ. ಭಾನುವಾರ ರಾತ್ರಿ ಲಾಮ್ಸಂಗ್‌ನಲ್ಲಿ ಈ ಘಟನೆ ಸಂಭವಿಸಿದಾಗ ಸಂತ್ರಸ್ತರು ಎರಡು ವಾಹನಗಳಲ್ಲಿ ಪ್ರಯಾಣಿಸುತ್ತಿದ್ದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಮತ್ತು ಉಗ್ರಗಾಮಿಗಳನ್ನು ಬಂಧಿಸಲು ಸೇನೆ, ಅಸ್ಸಾಂ ರೈಫಲ್ಸ್ ಜೊತೆಗೆ ಮಣಿಪುರ ಪೊಲೀಸ್ ಕಮಾಂಡೋ ಮತ್ತು ಗಡಿ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಸೇರಿದಂತೆ ಇತರ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ತಮ್ಮ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿವೆ ಎಂದು ಇಂಫಾಲ್‌ನಲ್ಲಿರುವ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡ್ರೋನ್ ಮತ್ತು ಕ್ವಾಡ್-ಕಾಪ್ಟರ್‌ಗಳ ಕಣ್ಗಾವಲು ಕವರ್ ಅಡಿಯಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಕಾರ್ಯಾಚರಣೆಗಳು ಇಲ್ಲಿಯವರೆಗೆ ಹೆಚ್ಚಿನ ಸಂಖ್ಯೆಯ ಶಸ್ತ್ರಾಸ್ತ್ರಗಳನ್ನು (ಹೆಚ್ಚಾಗಿ ಸ್ವಯಂಚಾಲಿತ), ಮೋರ್ಟಾರ್‌ಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧೋಚಿತ ಶಸ್ತ್ರಾಸ್ತ್ರಗಳನ್ನು ಮರುಪಡೆಯಲು ಕಾರಣವಾಗಿವೆ ಎಂದು ರಕ್ಷಣಾ ವಕ್ತಾರರು ಹೇಳಿದರು.

ಈ ಕಾರ್ಯಾಚರಣೆಗಳನ್ನು ನಡೆಸುವಾಗ, ಸ್ಥಳೀಯರಿಗೆ ಯಾವುದೇ ಕಿರುಕುಳವಾಗದಂತೆ ಮತ್ತು ಸಿಬ್ಬಂದಿ ಸುರಕ್ಷತೆ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ದೇಶನದ ನಂತರ, ಮಣಿಪುರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಆದಷ್ಟು ಬೇಗ ಶರಣಾಗಿಸುವಂತೆ ಮಾಡಲು ಭದ್ರತಾ ಪಡೆಗಳು ಮತ್ತೊಮ್ಮೆ ಮನವಿ ಮಾಡಿದೆ.

ಈ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ವಿಫಲವಾದರೆ, ಅಂತಹ ಎಲ್ಲ ಜನರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭದ್ರತಾ ಪಡೆಗಳು ಎಚ್ಚರಿಸಿವೆ.

ಜೂನ್ 1 ರಂದು ಹಿಂಸಾಚಾರ ಪೀಡಿತ ರಾಜ್ಯಕ್ಕೆ ತಮ್ಮ ನಾಲ್ಕು ದಿನಗಳ ಭೇಟಿಯ ಕೊನೆಯ ದಿನದಂದು ಶಾ, ಸಂಬಂಧಪಟ್ಟವರೆಲ್ಲರೂ ತಮ್ಮ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ಮತ್ತು ಆಡಳಿತಕ್ಕೆ ಒಪ್ಪಿಸುವಂತೆ ವಿನಂತಿಸಿದರು. ಇಲ್ಲದಿದ್ದರೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊಂದಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದರು.

ಮಣಿಪುರದಲ್ಲಿ ಗಲಭೆಗಳು ಭುಗಿಲೆದ್ದ ನಂತರ ಅನೇಕ ಪೊಲೀಸ್ ಠಾಣೆಗಳು ಮತ್ತು ಭದ್ರತಾ ಶಿಬಿರಗಳಿಂದ ದುಷ್ಕರ್ಮಿಗಳು ಮತ್ತು ಉದ್ರೇಕಗೊಂಡ ಜನಸಮೂಹದಿಂದ ಸಾವಿರಾರು ವಿವಿಧ ರೀತಿಯ ಶಸ್ತ್ರಾಸ್ತ್ರಗಳು ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ಲೂಟಿ ಮಾಡಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

ಪ್ರಸ್ತುತ, 13 ಜಿಲ್ಲೆಗಳಲ್ಲಿ ಸಮುದಾಯ ಭವನಗಳು ಸೇರಿದಂತೆ 272 ಪರಿಹಾರ ಶಿಬಿರಗಳಲ್ಲಿ ವಿವಿಧ ಸಮುದಾಯಗಳ ಸುಮಾರು 37,450 ಜನರು ಆಶ್ರಯ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳು ಸೇರಿದಂತೆ ಹೆಚ್ಚಿನ ಜಿಲ್ಲೆಗಳಲ್ಲಿ 7-12 ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com