ಅವಧೇಶ್ ರಾಯ್ ಹತ್ಯೆ ಪ್ರಕರಣ: ಮುಖ್ತಾರ್ ಅನ್ಸಾರಿ ತಪ್ಪಿತಸ್ಥ: ವಾರಾಣಸಿ ಕೋರ್ಟ್ ಮಹತ್ವದ ತೀರ್ಪು

ಅವಧೇಶ್ ರಾಯ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಖ್ತಾರ್ ಅನ್ಸಾರಿ ತಪ್ಪಿತಸ್ಥ ಎಂದು ವಾರಾಣಸಿ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.
ಅವಧೇಶ್ ರಾಯ್ ಹತ್ಯೆ ಪ್ರಕರಣ
ಅವಧೇಶ್ ರಾಯ್ ಹತ್ಯೆ ಪ್ರಕರಣ

ವಾರಣಾಸಿ: ಅವಧೇಶ್ ರಾಯ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಖ್ತಾರ್ ಅನ್ಸಾರಿ ತಪ್ಪಿತಸ್ಥ ಎಂದು ವಾರಾಣಸಿ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.

1991ರ ಅವಧೇಶ್ ರಾಯ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಶಾಸಕ, ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ತಪ್ಪಿತಸ್ಥ ಎಂದು ವಾರಾಣಸಿಯ ಸಂಸದರು ಶಾಸಕರ ನ್ಯಾಯಾಲಯ ತೀರ್ಪು ನೀಡಿದೆ. ಆಗಸ್ಟ್ 3, 1991ರಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ ಅವರನ್ನು ವಾರಾಣಸಿಯ ಅಜಯ್ ರಾವ್ ಮನೆ ಎದುರೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಪ್ರಕರಣ ಸಂಬಂಧ ಅವಧೇಶ್ ರಾಯ್ ಸಹೋದರ ಅಜಯ್ ರಾಯ್ ಅವರು ಎಫ್‌ಐಆರ್‌ನಲ್ಲಿ ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್ ಮತ್ತು ಮಾಜಿ ಶಾಸಕ ಅಬ್ದುಲ್ ಕಲೀಂ ಅವರನ್ನು ಹೆಸರಿಸಿದ್ದರು. ಮೇ 17 ರಂದು, ಘಾಜಿಪುರ ಸಂಸದ/ಶಾಸಕ ನ್ಯಾಯಾಲಯವು ಜಿಲ್ಲೆಯ ಉತ್ತರ ಪ್ರದೇಶದ ಮೊಹಮ್ಮದಾಬಾದ್ ಪ್ರದೇಶದಲ್ಲಿ ಕೊಲೆ ಯತ್ನದ ಸಂಚಿನ ಪ್ರಕರಣದಲ್ಲಿ ಆರೋಪಿ ಮುಕ್ತಾರ್ ಅನ್ಸಾರಿಯನ್ನು ಖುಲಾಸೆಗೊಳಿಸಿತ್ತು.  

2009 ರಲ್ಲಿ, ಮೀರ್ ಹಸನ್ 120 ಬಿ ಅಡಿಯಲ್ಲಿ ಅನ್ಸಾರಿ ವಿರುದ್ಧ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 ರ ಅಡಿಯಲ್ಲಿ ಅನ್ಸಾರಿ ವಿರುದ್ಧ ಗಾಜಿಪುರದ ಮೊಹಮ್ಮದಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com