ಉತ್ತರ ಪ್ರದೇಶ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಸಾವು; ಬಿಜೆಪಿಯಿಂದ ಆರೋಪಿಗಳ ರಕ್ಷಣೆ ಆರೋಪ

ಉತ್ತರ ಪ್ರದೇಶದ ಬಸ್ತಿಯಲ್ಲಿ ಮೂವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 12 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಸ್ತಿ: ಉತ್ತರ ಪ್ರದೇಶದ ಬಸ್ತಿಯಲ್ಲಿ ಮೂವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 12 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕಳೆದ ಸೋಮವಾರ ಗೌರ್ ಪ್ರದೇಶದಲ್ಲಿ ಬಾಲಕಿ ತರಕಾರಿ ಖರೀದಿಸಲು ತೆರಳಿದ್ದ ವೇಳೆ ಮೂವರು ಕಾಮುಕರು ಈ ಕೃತ್ಯ ಎಸಗಿದ್ದರು.

ಮೂವರು ಆರೋಪಿಗಳನ್ನು ಮೋನು ಸಾಹ್ನಿ, ರಾಜನ್ ನಿಶಾದ್ ಮತ್ತು ಕುಂದನ್ ಸಿಂಗ್ ಎಂದು ಗುರುತಿಸಲಾಗಿದ್ದು, ಆಕೆಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಾಲಕಿ ಮನೆಗೆ ವಾಪಸ್ ಬರದಿದ್ದಾಗ ಆಕೆಯ ಕುಟುಂಬ ಸದಸ್ಯರು ಅವಳನ್ನು ಹುಡುಕಲು ಪ್ರಾರಂಭಿಸಿದ್ದು, ಈ ವೇಳೆ ಆರೋಪಿ ಮೋನು ಸಾಹ್ನಿ, ಕುಂದನ್ ಸಿಂಗ್ ಮನೆ ಬಳಿ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ವಿಚಾರ ಅವರಿಗೆ ತಿಳಿಸಿದ್ದಾನೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಸಂಜೆ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಗೆ ಆರೋಪಿ ಮೋನು ಸಾಹ್ನಿ ಪರಿಚಿತನಾಗಿದ್ದು, ಆಕೆಯನ್ನು ತನ್ನೊಂದಿಗೆ ಕರೆದೊಯ್ದ, ಇತರ ಇಬ್ಬರೊಂದಿಗೆ ಹೀನ ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ಅಧೀಕ್ಷಕ ಗೋಪಾಲ್ ಕೃಷ್ಣ ಚೌಧರಿ ಹೇಳಿದ್ದಾರೆ.

ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಪಿಟಿಐಗೆ ತಿಳಿಸಿದ್ದಾರೆ.

ಈ ಸಂಬಂಧ ಮೂವರ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.

ಈ ಮಧ್ಯೆ, ಆರೋಪಿಗಳನ್ನು ಬಿಜೆಪಿ ಮುಖಂಡರು ರಕ್ಷಿಸಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com