ದಕ್ಷಿಣ ಮುಂಬೈನ ಹಾಸ್ಟೆಲ್‌ನಲ್ಲಿ ಕಾಲೇಜು ವಿದ್ಯಾರ್ಥಿನಿ ಹತ್ಯೆ
ದಕ್ಷಿಣ ಮುಂಬೈನ ಚರ್ಚ್‌ಗೇಟ್ ಪ್ರದೇಶದಲ್ಲಿನ ಹಾಸ್ಟೆಲ್ ನಲ್ಲಿ 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮಂಗಳವಾರ ಸಂಜೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 07th June 2023 12:03 AM | Last Updated: 07th June 2023 12:47 AM | A+A A-

ಸಾಂದರ್ಭಿಕ ಚಿತ್ರ
ಮುಂಬೈ: ದಕ್ಷಿಣ ಮುಂಬೈನ ಚರ್ಚ್‌ಗೇಟ್ ಪ್ರದೇಶದಲ್ಲಿನ ಹಾಸ್ಟೆಲ್ ನಲ್ಲಿ 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮಂಗಳವಾರ ಸಂಜೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.ಆದರೆ ಶವಪರೀಕ್ಷೆ ವರದಿ ಲಭ್ಯವಾದ ನಂತರವೇ ಅದು ಖಚಿತವಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೊಲೆಯಾದ ಯುವತಿ ಬಾಂದ್ರಾ ಉಪನಗರದ ಸರ್ಕಾರಿ ಪಾಲಿಟೆಕ್ನಿಕ್‌ನ ವಿದ್ಯಾರ್ಥಿನಿ ಎಂದು ಅವರು ಹೇಳಿದರು.
Maharashtra | On the fourth floor of a Women's Hostel located on Marine Drive behind Charni Road station, the body of an 18-year-old girl was found in her room. Police reached the spot, registered FIR and an investigation is underway: Praveen Munde, DCP, Mumbai (06.06) pic.twitter.com/JR8Jiot0Cc
— ANI (@ANI) June 6, 2023
ಹಾಸ್ಟೆಲ್ನ ನಾಲ್ಕನೇ ಅಂತಸ್ತಿನಲ್ಲಿದ್ದ ಆಕೆಯ ಕೊಠಡಿ ಹೊರಗಿನಿಂದ ಬೀಗ ಹಾಕಿದ್ದು, ಮಧ್ಯಾಹ್ನವಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಕೊಠಡಿ ಪ್ರವೇಶಿಸಿದ ನಂತರ ಕುತ್ತಿಗೆಗೆ ದುಪ್ಪಟ್ಟು ಬಿಗಿದುಕೊಂಡು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಈ ಪ್ರಕರಣದಲ್ಲಿ ಶಂಕಿತ ಎನ್ನಲಾದ ಹಾಸ್ಟೆಲ್ ಭದ್ರತಾ ಸಿಬ್ಬಂದಿಯೊಬ್ಬರು ಬೆಳಿಗ್ಗೆ ರೈಲ್ವೆ ಹಳಿಗಳ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಮೆರೈನ್ ಡ್ರೈವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.