ತ್ರಿವಳಿ ರೈಲು ಅಪಘಾತ: ಪಶ್ಚಿಮ ಬಂಗಾಳದ ಶಾಲಿಮಾರ್‌ನಿಂದ ಚೆನ್ನೈಗೆ ಕೋರಮಂಡಲ್ ಎಕ್ಸ್‌ಪ್ರೆಸ್ ಪ್ರಯಾಣ

ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ನಂತರ ಇದೇ ಮೊದಲ ಬಾರಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬುಧವಾರ ತನ್ನ ಸೇವೆಗಳನ್ನು ಪುನರಾರಂಭಿಸಿತು ಮತ್ತು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಿತು.
ಪಶ್ಚಿಮ ಬಂಗಾಳದ ಶಾಲಿಮಾರ್‌ನಿಂದ ಚೆನ್ನೈಗೆ ಪ್ರಯಾಣ ಬೆಳೆಸಿದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು
ಪಶ್ಚಿಮ ಬಂಗಾಳದ ಶಾಲಿಮಾರ್‌ನಿಂದ ಚೆನ್ನೈಗೆ ಪ್ರಯಾಣ ಬೆಳೆಸಿದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು

ಹೌರಾ: ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ನಂತರ ಇದೇ ಮೊದಲ ಬಾರಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬುಧವಾರ ತನ್ನ ಸೇವೆಗಳನ್ನು ಪುನರಾರಂಭಿಸಿತು ಮತ್ತು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಿತು.

ಜೂನ್ 2 ರಂದು ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಅಪಘಾತ ಸಂಭವಿಸಿತ್ತು. ಅದಾದ ನಂತರ ರೈಲು ತನ್ನ ಸೇವೆಗಳನ್ನು ಪುನರಾರಂಭಿಸುತ್ತಿರುವುದು ಇದೇ ಮೊದಲು. ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಸಂಭವಿಸಿದ ಅಪಘಾತದಲ್ಲಿ 288 ಜನರು ಸಾವಿಗೀಡಾಗಿದ್ದರು.

ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆಯಿತು. ಈ ವೇಳೆ ಹಲವಾರು ಬೋಗಿಗಳು ಹಳಿತಪ್ಪಿದವು. ಬಳಿಕ ಬೆಂಗಳೂರಿನ ಯಶವಂತಪುರದಿಂದ ಬರುತ್ತಿದ್ದ ಹೌರಾ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿದ ರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿತ್ತು.

ಸೋಮವಾರ, ಜಿಲ್ಲೆಯಲ್ಲಿ ಪ್ಯಾಸೆಂಜರ್ ರೈಲು ಸೇವೆಗಳು ಪುನರಾರಂಭಗೊಂಡ ನಂತರ ಹೌರಾ-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬಾಲಸೋರ್‌ನಲ್ಲಿ ಪುನಃಸ್ಥಾಪಿಸಲಾದ ರೈಲ್ವೆ ಹಳಿಯನ್ನು ದಾಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com