ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಈಜಿಪ್ಟ್‌ ಭೇಟಿ ಸಾಧ್ಯತೆ 

ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳು ಈಜಿಪ್ಟ್ ಗೆ ಭೇಟಿ ನೀಡುವ ಸಾಧ್ಯತೆಯಿದೆ. ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಕಾರ್ಯತಂತ್ರ ಪಾಲುದಾರಿಕೆ ಮಟ್ಟಕ್ಕೆ ಏರಿಸಿದ ಸುಮಾರು ಆರು ತಿಂಗಳ ನಂತರ ಪ್ರಧಾನಿ ಈ ಬೆಳವಣಿಗೆಯಾಗಿದೆ  ಎಂದು ರಾಜತಾಂತ್ರಿಕ ಮೂಲಗಳು ಬುಧವಾರ ತಿಳಿಸಿವೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳು ಈಜಿಪ್ಟ್ ಗೆ ಭೇಟಿ ನೀಡುವ ಸಾಧ್ಯತೆಯಿದೆ. ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಕಾರ್ಯತಂತ್ರ ಪಾಲುದಾರಿಕೆ ಮಟ್ಟಕ್ಕೆ ಏರಿಸಿದ ಸುಮಾರು ಆರು ತಿಂಗಳ ನಂತರ ಪ್ರಧಾನಿ ಈ ಬೆಳವಣಿಗೆಯಾಗಿದೆ ಎಂದು ರಾಜತಾಂತ್ರಿಕ ಮೂಲಗಳು ಬುಧವಾರ ತಿಳಿಸಿವೆ.

2014ರಲ್ಲಿ ಪ್ರಧಾನಿಯಾದ ಬಳಿಕ ನರೇಂದ್ರ  ಮೋದಿ ಅವರು ಆಫ್ರಿಕಾಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ವ್ಯಾಪಾರ, ಹೂಡಿಕೆ, ಕೃಷಿ ಮತ್ತು ರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಈ ಭೇಟಿಯನ್ನು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿಯವರ ಈಜಿಪ್ಟ್ ಪ್ರವಾಸದ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಅರಬ್ ಜಗತ್ತು ಮತ್ತು ಆಫ್ರಿಕಾ ಎರಡರ ರಾಜಕೀಯದಲ್ಲಿ ಪ್ರಮುಖ ರಾಷ್ಟ್ರವಾಗಿರುವ ಈಜಿಪ್ಟ್‌ನೊಂದಿಗೆ ಬಾಂಧವ್ಯವನ್ನು ಇನ್ನಷ್ಟು ವಿಸ್ತರಿಸಲು ಭಾರತ ಉತ್ಸುಕವಾಗಿದೆ. ಇದು ಆಫ್ರಿಕಾ ಮತ್ತು ಯುರೋಪ್‌ನ ಮಾರುಕಟ್ಟೆಗಳಿಗೆ ಪ್ರಮುಖ ಗೇಟ್‌ವೇ ಆಗಿಯೂ ಕಂಡುಬರುತ್ತದೆ.

ಜನವರಿಯಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಹ್ ಫತ್ತಾಹ್ ಎಲ್-ಸಿಸಿಭಾರತ ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟಕ್ಕೆ ಏರಿಸಲಾಯಿತು. ದ್ವಿಪಕ್ಷೀಯ ವ್ಯಾಪಾರದ ಪ್ರಮಾಣವನ್ನು ಮುಂದಿನ ಐದು ವರ್ಷಗಳಲ್ಲಿ  7 ಶತಕೋಟಿಯಿಂದ ಡಾಲರ್ ನಿಂದ  12 ಶತಕೋಟಿ ಡಾಲರ್ ಗೆ ಹೆಚ್ಚಿಸಲು ಉಭಯ ನಾಯಕರು ತಮ್ಮ ಮಾತುಕತೆ ವೇಳೆ ನಿರ್ಧರಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com