ಭೀಕರ ಅಪಘಾತ: ಎಸ್‌ಯುವಿ ಮೇಲೆ ಟ್ರಕ್ ಪಲ್ಟಿಯಾಗಿ 7 ಮಂದಿ ಸಾವು, ಇಬ್ಬರಿಗೆ ಗಾಯ

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್‌ಯುವಿ) ಮೇಲೆ ಡಂಪರ್-ಟ್ರಕ್ ಪಲ್ಟಿಯಾಗಿ ಏಳು ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಿಧಿ: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್‌ಯುವಿ) ಮೇಲೆ ಡಂಪರ್-ಟ್ರಕ್ ಪಲ್ಟಿಯಾಗಿ ಏಳು ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಡೋಲ್ ಗ್ರಾಮದ ಬಳಿಯ ಸಿಧಿ-ಟಿಕಾರಿ ರಸ್ತೆಯಲ್ಲಿ ಬೆಳಿಗ್ಗೆ 9.30 ರಿಂದ 10 ಗಂಟೆಯ ನಡುವೆ ಅಪಘಾತ ಸಂಭವಿಸಿದೆ ಎಂದು ಸಿಧಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರವೀಂದ್ರ ಸಿಂಗ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಡಂಪರ್-ಟ್ರಕ್ ಮೊದಲು ಎಸ್‌ಯುವಿಗೆ ಡಿಕ್ಕಿ ಹೊಡೆದು ನಂತರ ಅದರ ಮೇಲೆ ಪಲ್ಟಿ ಹೊಡೆದಿದೆ. ಪರಿಣಾಮವಾಗಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.

ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com