ಶರದ್ ಪವಾರ್ ಗೆ ಜೀವ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಮಹಾ ಸಿಎಂ
ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶುಕ್ರವಾರ ಹೇಳಿದ್ದಾರೆ.
Published: 09th June 2023 04:29 PM | Last Updated: 09th June 2023 07:39 PM | A+A A-

ಏಕನಾಥ್ ಶಿಂಧೆ
ಮುಂಬೈ: ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶುಕ್ರವಾರ ಹೇಳಿದ್ದಾರೆ.
ಶರದ್ ಪವಾರ್ ಅವರಿಗೆ ಟ್ವಿಟರ್ ಮೂಲಕ ಬೆದರಿಕೆ ಹಾಕಲಾಗಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಮತ್ತು ಈ ಸಂಬಂಧ ನಾನು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವೈಯಕ್ತಿಕವಾಗಿ ಮಾತನಾಡಿ, ಸೂಕ್ತ ತನಿಖೆಗೆ ಸೂಚನೆ ನೀಡಿದ್ದೇನೆ ಎಂದು ಶಿಂಧೆ ತಿಳಿಸಿದ್ದಾರೆ.
ಇದನ್ನು ಓದಿ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ; ಮುಂಬೈ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿದ ಪುತ್ರಿ ಸುಪ್ರಿಯಾ ಸುಳೆ
ಶರದ್ ಪವಾರ್ ಅವರು ಒಬ್ಬ ಹಿರಿಯ ನಾಯಕ ಮತ್ತು ನಾವೆಲ್ಲರೂ ಅವರನ್ನು ಗೌರವಿಸುತ್ತೇವೆ. ಅವರ ಸುರಕ್ಷತೆ ಬಗ್ಗೆ ಸಂಪೂರ್ಣ ಕಾಳಜಿ ವಹಿಸಲಾಗಿದೆ. ಅಗತ್ಯವಿದ್ದಲ್ಲಿ ಅವರ ಭದ್ರತೆಯನ್ನು ಹೆಚ್ಚಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮಹಾ ಸಿಎಂ ಹೇಳಿದ್ದಾರೆ.