'WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲು'; ಅಪ್ರಾಪ್ತ ಕುಸ್ತಿಪಟುವಿನ ತಂದೆ ಯೂ-ಟರ್ನ್!

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಟ್ವಿಸ್ಟ್ ದೊರೆತಿದ್ದು, ಈ ಹಿಂದೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಇದೀಗ ಯೂಟರ್ನ್ ಹೊಡೆದಿದ್ದು, WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಜಂತರ್ ಮಂತರ್‌ನಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಪ್ರತಿಭಟನೆ ನಡೆಸಿದರು.
ಜಂತರ್ ಮಂತರ್‌ನಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಪ್ರತಿಭಟನೆ ನಡೆಸಿದರು.

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಟ್ವಿಸ್ಟ್ ದೊರೆತಿದ್ದು, ಈ ಹಿಂದೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಇದೀಗ ಯೂಟರ್ನ್ ಹೊಡೆದಿದ್ದು, WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ತನ್ನ ಮಗಳು ಬಗ್ಗೆ ಬ್ರಿಜ್ ಭೂಷಣ್ 'ಷ್ಪಕ್ಷಪಾತವಾಗಿ' ವರ್ತಿಸಿದ ನಂತರ ಮುಖ್ಯಸ್ಥನ ವಿರುದ್ಧ ಕಿರುಕುಳ ಆರೋಪ ಹೊರಿಸಲಾಯಿತು ಎಂದು ಅಪ್ರಾಪ್ತೆ ತಂದೆ ಹೇಳಿದ್ದಾರೆ. ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ಆರೋಪ ಮಾಡಿರುವ ಆಪ್ರಾಪ್ತ ಕುಸ್ತಿಪಟುವಿನ ತಂದೆ, '2022 ರ ಏಷ್ಯನ್ ಚಾಂಪಿಯನ್‌ಶಿಪ್‌ನ ಅಂತಿಮ ಟ್ರಯಲ್ಸ್‌ಗೆ ತನ್ನ ಮಗಳು ಅರ್ಹತೆ ಪಡೆಯಲು ವಿಫಲವಾದ ನಂತರ ಬ್ರಿಜ್ ಭೂಷಣ್ ವಿರುದ್ಧ ಕೋಪಗೊಂಡಿದ್ದೆ ಎಂದು ಹೇಳಿ್ದಾರೆ. 

ಅಂತೆಯೇ ಬ್ರಿಜ್ ಭೂಷಣ್ ನನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿಲ್ಲ.. ಆದರೆ ಅವರ ವಿಧಾನವು ಅವಳ ವಿರುದ್ಧ ಸಂಪೂರ್ಣವಾಗಿ ಪಕ್ಷಪಾತದಿಂದ ಕೂಡಿತ್ತು. ಇದೇ ಕಾರಣದಿಂದ ಲಕ್ನೋದಲ್ಲಿ ನಡೆದ 2022 ರ ಅಂಡರ್ 17 ಏಷ್ಯನ್ ಚಾಂಪಿಯನ್‌ಶಿಪ್ ಟ್ರಯಲ್ಸ್‌ನಲ್ಲಿ ಸೋತರು. ತೀರ್ಪುಗಾರರ ಒಂದು ತಪ್ಪು ನಿರ್ಧಾರದಿಂದ ನನ್ನ ಮಗಳ ಒಂದು ವರ್ಷದ ಶ್ರಮ ವ್ಯರ್ಥವಾಯಿತು. ಇದು ನಿಯಮಗಳಿಗೆ ವಿರುದ್ಧವಾಗಿದೆ, ನನ್ನ ಮಗಳು ಪಂದ್ಯ ಆಡಿದ ಆಟಗಾರ್ತಿ ಸೇರಿದಂತೆ ಎಲ್ಲಾ ಸಿಬ್ಬಂದಿ ದೆಹಲಿಯಿಂದ ಬಂದವರು.. ಇದರಿಂದಲೇ ತನ್ನ ಮಗಳು ಸೋಲಬೇಕಾಯಿತು ಎಂದು ತಂದೆ ಹೇಳಿದರು.

ಒಬ್ಬ ಅಪ್ರಾಪ್ತ ಬಾಲಕಿ ಸೇರಿದಂತೆ 7 ಮಹಿಳಾ ಕುಸ್ತಿಪಟುಗಳು ನೀಡಿರುವ ಲೈಂಗಿಕ ಕಿರುಕುಳದ ಆರೋಪದ ಮೇಲೆ ಡಬ್ಲ್ಯುಎಫ್‌ಐ ಮುಖ್ಯಸ್ಥರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಪ್ರಾಪ್ತ ಕುಸ್ತಿಪಟು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಪ್ರಕರಣವನ್ನು ದಾಖಲಿಸಲಾಗಿದೆ, ಜೂನ್ 5 ರಂದು ಮ್ಯಾಜಿಸ್ಟ್ರೇಟ್ ಮುಂದೆ ಹೊಸ ಹೇಳಿಕೆಯನ್ನು ದಾಖಲಿಸಿದ್ದಾರೆ. ಅಪ್ರಾಪ್ತ ವಯಸ್ಕ ಕುಸ್ತಿಪಟುವಿನ ತಂದೆ ಅವರು ಹೊಸ ಹೇಳಿಕೆಯನ್ನು ದಾಖಲಿಸಿದ್ದಾರೆ. 

ಬುಧವಾರದಂದು, ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಜೂನ್ 15 ರೊಳಗೆ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ ನಂತರ ಕುಸ್ತಿಪಟುಗಳು ತಮ್ಮ ಆಂದೋಲನವನ್ನು ಹಿಂಪಡೆದುಕೊಳ್ಳಲು ಒಪ್ಪಿಕೊಂಡರು. “ನಾವು ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗೆ ಅತ್ಯಂತ ಸಕಾರಾತ್ಮಕ ಚರ್ಚೆ ನಡೆಸಿದ್ದೇವೆ... ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದರು. ಅದರಂತೆ ಜೂನ್ 15 ರೊಳಗೆ ಚಾರ್ಜ್‌ಶೀಟ್ ಸಲ್ಲಿಸಬೇಕು. ಈ ಬೇಡಿಕೆಯನ್ನು ಒಮ್ಮತದಿಂದ ಒಪ್ಪಲಾಯಿತು ಎಂದು ಠಾಕೂರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com