ಮೋದಿ ಅವಧಿಯಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿಕೆ: ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಒಂಬತ್ತು ವರ್ಷಗಳ ಅವಧಿಯಲ್ಲಿ ಭಾರತದ ಸಾಲ ಸುಮಾರು "ಮೂರು ಪಟ್ಟು" ಹೆಚ್ಚಾಗಿದ್ದು, ಈಗ 155 ಲಕ್ಷ ಕೋಟಿ ರೂ.ಗೆ ಏರಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಒಂಬತ್ತು ವರ್ಷಗಳ ಅವಧಿಯಲ್ಲಿ ಭಾರತದ ಸಾಲ ಸುಮಾರು "ಮೂರು ಪಟ್ಟು" ಹೆಚ್ಚಾಗಿದ್ದು, ಈಗ 155 ಲಕ್ಷ ಕೋಟಿ ರೂ.ಗೆ ಏರಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ. ಅಲ್ಲದೆ ದೇಶದ ಆರ್ಥಿಕ ಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಒತ್ತಾಯಿಸಿದೆ.

ಮೋದಿ ಸರ್ಕಾರದ "ಆರ್ಥಿಕ ದುರುಪಯೋಗ" ಪ್ರಸ್ತುತ ಆರ್ಥಿಕತೆಯ ಸ್ಥಿತಿಗೆ ಕಾರಣವಾಗಿದೆ ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ ಅವರು ಪ್ರತಿಪಾದಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಪ್ರಿಯಾ, 2014 ರಲ್ಲಿ ಮೋದಿ ಅಧಿಕಾರ ವಹಿಸಿಕೊಂಡ ನಂತರ 100 ಲಕ್ಷ ಕೋಟಿ ರೂಪಾಯಿ ಸಾಲ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

2014 ರಲ್ಲಿ ಭಾರತದ ಸಾಲ ಕೇವಲ 55 ಲಕ್ಷ ಕೋಟಿ ರೂಪಾಯಿ ಇತ್ತು. ಅದು ಈಗ ಮೂರು ಪಟ್ಟು ಹೆಚ್ಚಾಗಿದ್ದು,  155 ಲಕ್ಷ ಕೋಟಿ ರೂಪಾಯಿಗೂ ಹೆಚ್ಚಾಗಿದೆ ಎಂದು ಕಾಂಗ್ರೆಸ್ ನಾಯಕಿ ಆರೋಪಿಸಿದ್ದಾರೆ.

67 ವರ್ಷಗಳಲ್ಲಿ 14 ಪ್ರಧಾನಿಗಳ ಆಡಳಿತದ ಅವಧಿಯಲ್ಲಿ ಭಾರತದ ಸಾಲ ಕೇವಲ 55 ಲಕ್ಷ ಕೋಟಿ ರೂಪಾಯಿಗಳಾಗಿದ್ದರೆ, ಪ್ರಧಾನಿ ಮೋದಿ ಅವರ ಅವಧಿಯಲ್ಲಿ 100 ಲಕ್ಷ ಕೋಟಿ ರೂಪಾಯಿ ಸಾಲ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com