ಜಮ್ಮು-ಕಾಶ್ಮೀರ: ಕಥುವಾ ಗಡಿಯಲ್ಲಿ ಪಾಕಿಸ್ತಾನದ ನಿಗೂಢ ಬಲೂನ್ ಪತ್ತೆ, ಕಾರ್ಯಾಚರಣೆಗಿಳಿದ ಸೇನಾಪಡೆ
ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
Published: 10th June 2023 11:19 AM | Last Updated: 10th June 2023 12:33 PM | A+A A-

ಸೇನಾಪಡೆ ವಶಪಡಿಸಿಕೊಂಡಿರುವ ನಿಗೂಢ ಬಲೂನ್.
ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
ಕಪ್ಪು ಬಿಳುಪು ಬಣ್ಣದ ನಿಗೂಢ ಬಲೂನ್ ನೆಲದ ಮೇಲೆ ಬಿದ್ದಿರುವುದು ಕಂಡು ಬಂದಿದೆ. ಭದ್ರತಾ ಪಡೆಗಳು ಅದನ್ನು ವಶಪಡಿಸಿಕೊಂಡಿವೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರ: ಪೂಂಚ್ ಬಳಿ ಗಡಿ ನುಸುಳಲು ಯತ್ನ, ಮೂವರು ಉಗ್ರರ ಬಂಧನ
ಬಲೂನ್ ಎಲ್ಲಿಂದ ಬಂದಿದೆ ಎಂದು ತನಿಖೆ ಮಾಡಲು ಪ್ರದೇಶದಲ್ಲಿ ಸೇನೆಯಿಂದ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಕಳೆದ ಫೆಬ್ರವರಿಯಲ್ಲಿ ಇದೇ ರೀತಿಯ ವಿಮಾನದ ಆಕಾರದ ಹಸಿರು ಮತ್ತು ಬಿಳಿ ಬಲೂನ್ ಶಿಮ್ಲಾದಲ್ಲಿ ಪತ್ತೆಯಾಗಿತ್ತು. ಅದರ ಮೇಲೆ ಸಹ ಪಿಐಎ ಲೋಗೋವನ್ನು ಮುದ್ರಿಸಲಾಗಿತ್ತು.
ಮೇ 20 ರಂದು ಅಮೃತಸರದಲ್ಲಿ ಮಾದಕ ವಸ್ತುಗಳನ್ನು ಹೊಂದಿದ್ದ ಪಾಕಿಸ್ತಾನದ ಡ್ರೋಣ್'ನ್ನು ಸೇನೆ ಹೊಡೆದುರುಳಿಸಿತ್ತು.