ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಪುಣೆಯ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಆರೋಪಿ ಸಾಗರ್ ಬರ್ವೆ ಖಾಸಗಿ ಸಂಸ್ಥೆಯೊಂದರ ಡೇಟಾ ಫೀಡಿಂಗ್ ಮತ್ತು ಅನಾಲಿಟಿಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿದ್ದ ಮುಂಬೈ ಕ್ರೈಂ ಬ್ರಾಂಚ್ ಬಾರ್ವೆಯನ್ನು ಮುಂಬೈಗೆ ಕರೆತಂದಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಂಗಳವಾರದವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2013ರ ಆಗಸ್ಟ್ 20ರಂದು ಪುಣೆಯಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರಂತೆಯೇ 82 ವರ್ಷದ ಪವಾರ್ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಸಂದೇಶ ಬಂದಿತ್ತು ಎಂದು ಎನ್‌ಸಿಪಿ ಜೂನ್ 9 ರಂದು ಹೇಳಿದೆ.
Advertisement