ಕಾಶ್ಮೀರದ ದೋಡಾದಲ್ಲಿ 5.4 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪನದ ಅನುಭವ

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(ಎನ್‌ಸಿಎಸ್) ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(ಎನ್‌ಸಿಎಸ್) ತಿಳಿಸಿದೆ.

ಇಂದು ಮಧ್ಯಾಹ್ನ 1.33ಕ್ಕೆ ಈ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ರಷ್ಚು ತೀವ್ರತೆ ದಾಖಲಾಗಿದೆ ಎನ್ ಸಿಎಸ್ ಟ್ವೀಟ್ ಮಾಡಿದೆ.

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿದೆ. ಆದರೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ 

"ಭೂಕಂಪದಿಂದಾಗಿ ಶಾಲಾ ಮಕ್ಕಳು ಭಯಭೀತರಾಗಿದ್ದಾರೆ. ಅಂಗಡಿಗಳಲ್ಲಿದ್ದ ಜನ ಹೊರಗೆ ಓಡಿ ಬಂದರು. ಇದು ಕಳೆದ ವಾರದ ಕಂಪನಕ್ಕಿಂತ ಹೆಚ್ಚು ತೀವ್ರವಾಗಿತ್ತು... " ಎಂದು ಶ್ರೀನಗರದ ಸ್ಥಳೀಯರೊಬ್ಬರು ತಿಳಿಸಿದ್ದಾರೆ.

ಎನ್‌ಸಿಎಸ್ ಪ್ರಕಾರ ಜೂನ್ 9 ರಂದು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com