ಡಬ್ಲ್ಯೂ‌ಎಫ್ ಐ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳ, ಆರೋಪ ಪಟ್ಟಿ ದಾಖಲು

ಲೈಂಗಿಕ ಕಿರುಕುಳ ಅಪರಾಧಗಳಿಗಾಗಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಬ್ರಿಜ್ ಭೂಷಣ್ ಶರಣ್ ಸಿಂಗ್
ಬ್ರಿಜ್ ಭೂಷಣ್ ಶರಣ್ ಸಿಂಗ್
Updated on

ನವದೆಹಲಿ: ಲೈಂಗಿಕ ಕಿರುಕುಳ ಅಪರಾಧಗಳಿಗಾಗಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ತನಿಖೆ ಪೂರ್ಣಗೊಂಡ ನಂತರ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ 354, 354 ಎ, 354 ಡಿ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧಗಳಿಗಾಗಿ ಚಾರ್ಜ್‌ಶೀಟ್ ನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ. 

ಆದಾಗ್ಯೂ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟುಗಳು ಸಲ್ಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ಪೊಲೀಸರು ಶಿಫಾರಸು ಮಾಡಿದ್ದಾರೆ ಮತ್ತು ತನಿಖೆಯಲ್ಲಿ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಪಟಿಯಾಲ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com