ಆಂಧ್ರ ಪ್ರದೇಶ: 10ನೇ ತರಗತಿ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕರು
ಟ್ಯೂಷನ್‌ಗೆ ಹೋಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಭೀಕರ ಕೃತ್ಯ ಆಂಧ್ರಪ್ರ ದೇಶದ ಬಾಪಟ್ಲಾ ಜಿಲ್ಲೆಯಲ್ಲಿ ನಡೆದಿದೆ.
Published: 16th June 2023 08:13 PM | Last Updated: 16th June 2023 09:04 PM | A+A A-

ಸಾಂದರ್ಭಿಕ ಚಿತ್ರ
ಬಾಪಟ್ಲಾ: ಟ್ಯೂಷನ್‌ಗೆ ಹೋಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಭೀಕರ ಕೃತ್ಯ ಆಂಧ್ರಪ್ರ ದೇಶದ ಬಾಪಟ್ಲಾ ಜಿಲ್ಲೆಯಲ್ಲಿ ನಡೆದಿದೆ.
ವೆಂಕಿ ಎಂಬ ಯುವಕ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಗಂಭೀರವಾದ ಸುಟ್ಟ ಗಾಯಗಳಿಂದ ಬಳಲುತ್ತಿದ್ದ 15 ವರ್ಷದ ಅಮರನಾಥ್ ನನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ "ವೆಂಕಿ" ಸೇರಿದಂತೆ ಮೂವರು ಯುವಕರ ಹೆಸರನ್ನು ಹೇಳಿದ್ದಾನೆ.
ಇದನ್ನು ಓದಿ: ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಅಗ್ನಿ ಅವಘಡ: ಹೊತ್ತಿ ಉರಿದ ಅಂಗಡಿ
ಚೆರುಕುಪಲ್ಲಿ ಮಂಡಲದ ರಾಜವೋಲು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಮರನಾಥ್ ಸೈಕಲ್ನಲ್ಲಿ ಟ್ಯೂಷನ್‌ಗೆ ಹೋಗುತ್ತಿದ್ದಾಗ ರೆಡ್ಲಪಾಲೆಂ ಬಳಿ ಯುವಕರು ತಡೆದಿದ್ದಾರೆ. ಈ ವೇಳೆ ವೆಂಕಟೇಶ್ವರ್, ಅಮರನಾಥ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಾಲಕನ ಕಿರುಚಾಟ ಕೇಳಿ ಸ್ಥಳೀಯರು ಬೆಂಕಿ ನಂದಿಸಿ ಗುಂಟೂರಿನ ಜಿಜಿಎಚ್‌ಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
21 ವರ್ಷದ ವೆಂಕಿ, ಮೃತ ಅಮರನಾಥ್ ಸಹೋದರಿಗೆ ಕಿರುಕುಳ ನೀಡುತ್ತಿದ್ದ. ಇದನ್ನು ಪ್ರಶ್ನಿಸಿದ್ದಕ್ಕೆ ವೆಂಕಿ ಈ ಕೃತ್ಯ ಎಸಗಿದ್ದಾನೆ ಎಂದು ಅಮರಾಥ್ ಕುಟುಂಬ ಆರೋಪಿಸಿದೆ.