ಗುಜರಾತ್‌: ಚಂಡಮಾರುತ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ

ಬಿಪರ್‌ ಜೋಯ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿನ ಪರಿಸ್ಥಿತಿ ಅವಲೋಕಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಗುಜರಾತ್‌ನ ಕಚ್ ಮತ್ತು ಜಖೌ ಬಂದರಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮಿತ್ ಶಾ ಸಾಂದರ್ಭಿಕ ಚಿತ್ರ
ಅಮಿತ್ ಶಾ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಬಿಪರ್‌ ಜೋಯ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿನ ಪರಿಸ್ಥಿತಿ ಅವಲೋಕಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಗುಜರಾತ್‌ನ ಕಚ್ ಮತ್ತು ಜಖೌ ಬಂದರಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೇ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಅಮಿತ್ ಶಾ, ಚಂಡಮಾರುತದಿಂದ ಆದ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮಾಹಿತಿ ಪಡೆಯಲಿದ್ದಾರೆ. 

ಇದಕ್ಕೂ ಮುನ್ನಾ ಚಂಡ ಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ನಂತರ ಕಚ್ ಮತ್ತು ಮಾಂಡ್ವಿಯ ಜಖೌ ಬಂದರಿಗೆ ತೆರಳಲಿದ್ದಾರೆ. ಆಶ್ರಯ ಮನೆಗಳಿಗೂ ಭೇಟಿ ನೀಡಿ ಜನರನ್ನು ಭೇಟಿ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಭುಜ್‌ನಲ್ಲಿರುವ ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಅಮಿತ್  ಶಾ,  ಸಂತ್ರಸ್ತರಿಗೆ ವಿತರಿಸಲಾಗುತ್ತಿರುವ ಆಹಾರ ಮತ್ತಿತರ ಸೌಲಭ್ಯಗಳನ್ನು ಪರಿಶೀಲಿಸುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com