ದೇಶದ ಇತಿಹಾಸದಲ್ಲಿ 'ತುರ್ತು ಪರಿಸ್ಥಿತಿ' ಕತ್ತಲೆ ಯುಗ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
ಪ್ರಜಾಪ್ರಭುತ್ವವನ್ನು ಬೆಂಬಲಿಸುವವರ ಮೇಲೆ ದೌರ್ಜನ್ಯ ಎಸಗಿದ ತುರ್ತು ಪರಿಸ್ಥಿತಿ ಸಮಯ ದೇಶದ ಇತಿಹಾಸದಲ್ಲಿ ಕರಾಳ ಯುಗ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
Published: 18th June 2023 01:43 PM | Last Updated: 18th June 2023 01:43 PM | A+A A-

ಪ್ರಧಾನಿ ಮೋದಿ(ಸಂಗ್ರಹ ಚಿತ್ರ)
ನವದೆಹಲಿ: ಪ್ರಜಾಪ್ರಭುತ್ವವನ್ನು ಬೆಂಬಲಿಸುವವರ ಮೇಲೆ ದೌರ್ಜನ್ಯ ಎಸಗಿದ ತುರ್ತು ಪರಿಸ್ಥಿತಿ ಸಮಯ ದೇಶದ ಇತಿಹಾಸದಲ್ಲಿ ಕರಾಳ ಯುಗ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದ್ದು ಅದು ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಸಂವಿಧಾನವನ್ನು ಎತ್ತಿ ಹಿಡಿಯುತ್ತದೆ. ಭಾರತೀಯರ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ ಜೂನ್ 25 ನೇ ತಾರೀಖನ್ನು ನಾವು ಮರೆಯಲು ಸಾಧ್ಯವಿಲ್ಲ" ಎಂದು ಹೇಳಿದರು. 1975ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ತುರ್ತುಪರಿಸ್ಥಿತಿ ಹೇರಿದ್ದರು.
ತಮ್ಮ ಮನ್ ಕಿ ಬಾತ್ ರೇಡಿಯೋ ಪ್ರಸಾರದಲ್ಲಿ ಮೋದಿ ಅವರು ನೈಸರ್ಗಿಕ ವಿಕೋಪಗಳನ್ನು ಎದುರಿಸಲು ಭಾರತದ ಹೆಚ್ಚುತ್ತಿರುವ ಸಾಮರ್ಥ್ಯವನ್ನು ಶ್ಲಾಘಿಸಿದರು, ಬಿಪೊರ್ ಜೋಯ್ ಚಂಡಮಾರುತದಿಂದ ಉಂಟಾದ ವಿನಾಶದಿಂದ ಕಚ್‌ನ ಜನರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಎರಡು ದಶಕಗಳ ಹಿಂದೆ ಸಂಭವಿಸಿದ ವಿನಾಶಕಾರಿ ಭೂಕಂಪದ ನಂತರ, ಕಚ್ ವಿನಾಶದಿಂದ ಚೇತರಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂದು ಜನರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಕಚ್‌ನ ಜನರು ದುರಂತದಿಂದ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಭಾರತದ ವಿಪತ್ತು ನಿರ್ವಹಣಾ ಸಾಮರ್ಥ್ಯ ಹೆಚ್ಚಿದೆ ಎಂದರು.
ಬಿಪರ್‌ಜೋಯ್ ಚಂಡಮಾರುತವು ಮೊನ್ನೆ ಗುರುವಾರ ಸಂಜೆ ಗುಜರಾತ್ ನ ಜಖೌ ಬಳಿ ಅಪ್ಪಳಿಸಿ ಭೂಕುಸಿತವನ್ನು ಮಾಡಿತು, ಗುಜರಾತ್‌ನ ಕಚ್ ಮತ್ತು ಸೌರಾಷ್ಟ್ರ ಪ್ರದೇಶಗಳಲ್ಲಿ ಹಲವು ಹಾನಿಗಳನ್ನು ಉಂಟುಮಾಡಿತ್ತು.
ಮುಂದಿನ ವಾರ ಪ್ರಧಾನಿ ಮೋದಿಯವರು ಅಮೆರಿಕಕ್ಕೆ ಪ್ರಯಾಣಿಸಲಿರುವ ಕಾರಣ ತಿಂಗಳ ಕೊನೆಯ ಭಾನುವಾರದ ಬದಲು ಇಂದು ಜೂನ್ 18ರಂದು ಮನ್ ಕಿ ಬಾತ್ ರೇಡಿಯೋ ಪ್ರಸಾರವನ್ನು ನಡೆಸುತ್ತಿರುವುದಾಗಿ ಪ್ರಧಾನಿ ಹೇಳಿದರು.
ತಮ್ಮ ಭೇಟಿಯ ವೇಳೆ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪ್ರತಿಯೊಬ್ಬರೂ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಲು ಯೋಗವನ್ನು ದಿನಚರಿಯಾಗಿ ಮಾಡಿಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.