ಈಜಿಪ್ಟ್‌ನಲ್ಲಿ ಬೋಹ್ರಿ ಮುಸ್ಲಿಮರಿಂದ ನವೀಕರಣಗೊಂಡ ಮಸೀದಿಗೆ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಈಜಿಪ್ಟ್ ಪ್ರವಾಸದಲ್ಲಿ, ಬೋಹ್ರಿ ಮುಸ್ಲಿಮರಿಂದ ನವೀಕರಣಗೊಂಡ 11ನೇ ಶತಮಾನದ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಮತ್ತು ಮೊದಲ ಮಹಾಯುದ್ಧದ ಸಮಯದಲ್ಲಿ ಈಜಿಪ್ಟ್‌ಗಾಗಿ...
ಪ್ರಧಾನಿ ಮೋದಿ(ಸಂಗ್ರಹ ಚಿತ್ರ)
ಪ್ರಧಾನಿ ಮೋದಿ(ಸಂಗ್ರಹ ಚಿತ್ರ)

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಈಜಿಪ್ಟ್ ಪ್ರವಾಸದಲ್ಲಿ, ಬೋಹ್ರಿ ಮುಸ್ಲಿಮರಿಂದ ನವೀಕರಣಗೊಂಡ 11ನೇ ಶತಮಾನದ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಮತ್ತು ಮೊದಲ ಮಹಾಯುದ್ಧದ ಸಮಯದಲ್ಲಿ ಈಜಿಪ್ಟ್‌ಗಾಗಿ ಹೋರಾಡಿ ಮಡಿದ ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಅವರು ಸೋಮವಾರ ಹೇಳಿದ್ದಾರೆ.

ಪ್ರಧಾನಿಯವರ ಮುಂಬರುವ ಅಮೆರಿಕ ಮತ್ತು ಈಜಿಪ್ಟ್ ಭೇಟಿಯ ಕುರಿತು ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ ಅವರು, ಜೂನ್ 24 ಮತ್ತು 25 ರಂದು ಪ್ರಧಾನಿ ಮೋದಿ ಈಜಿಪ್ಟ್‌ಗೆ ಭೇಟಿ ನೀಡಲಿದ್ದಾರೆ ಎಂದರು.

"ಈಜಿಪ್ಟ್‌ಗೆ ಪ್ರಧಾನಿ ಮೋದಿ ಅವರ ಮೊದಲ ಭೇಟಿ ಇದಾಗಿದೆ ಮತ್ತು 1997 ನಂತರ ಈಜಿಪ್ಟ್‌ಗೆ ಭಾರತೀಯ ಪ್ರಧಾನಿಯೊಬ್ಬರು ಮೊದಲ ಅಧಿಕೃತ ದ್ವಿಪಕ್ಷೀಯ ಭೇಟಿಯಾಗಿದೆ ಎಂದು ಕ್ವಾತ್ರಾ ತಿಳಿಸಿದ್ದಾರೆ.

ಜೂನ್ 24 ರಂದು ಕೈರೋ ತಲುಪಲಿರುವ ಪ್ರಧಾನಿ ಮೋದಿ ಅವರು ಮೊದಲು ಭಾರತದ ಘಟಕದೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಈಜಿಪ್ಟ್‌ನಲ್ಲಿರುವ ಸಣ್ಣ ಭಾರತೀಯ ಸಮುದಾಯದೊಂದಿಗೆ ಸಭೆ ನಡೆಸಲಿದ್ದಾರೆ. ಈಜಿಪ್ಟ್‌ನ ಕೆಲವು ಪ್ರಮುಖ ಗಣ್ಯರನ್ನ ಭೇಟಿ ಮಾಡಿದ ಬಳಿಕ ಅವರು ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಎಂದು ಕ್ವಾತ್ರಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com