ಸಿದ್ದರಾಮಯ್ಯ
ಸಿದ್ದರಾಮಯ್ಯ

ಇಷ್ಟೊಂದು ಸುಳ್ಳು' ಹೇಳುವ ಪ್ರಧಾನಿಯನ್ನು ನೋಡಿಲ್ಲ: ಸಾಂಗ್ಲಿಯಲ್ಲಿ ಮೋದಿ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಷ್ಟೊಂದು ‘ಸುಳ್ಳು’ ಹೇಳುವ ಪ್ರಧಾನಿಯನ್ನು ನೋಡಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Published on

ಸಾಂಗ್ಲಿ: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಷ್ಟೊಂದು ‘ಸುಳ್ಳು’ ಹೇಳುವ ಪ್ರಧಾನಿಯನ್ನು ನೋಡಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

 ಸಾಂಗ್ಲಿಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಘಟಕದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿತ್ತು ಎಂದು ಆರೋಪಿಸಿದರು. ನರೇಂದ್ರ ಮೋದಿ ಸರ್ಕಾರವನ್ನು ಸೋಲಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ ಎಂದರು. 

2014 ರಲ್ಲಿ ಮೋದಿ ಜನರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ ಜಮೆ, ಎರಡು ಕೋಟಿ ಉದ್ಯೋಗ ಸೃಷ್ಟಿ ಮತ್ತು ಅಚ್ಚೇ ದಿನ್ (ಒಳ್ಳೆಯ ದಿನಗಳು) ತರುವ ಬಗ್ಗೆ ಮಾತನಾಡಿದ್ದರು.  ಈ ರೀತಿಯ ಏನಾದರೂ ಆಗಿದೆಯೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ,
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೊತೆಗೆ ರಾಜ್ಯದ ಮೂಲೆ ಮೂಲೆಗಳಿಗೆ ಭೇಟಿ ನೀಡಿ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ವಿವರಿಸಿದೇವು,.ವಿವಿಧ ಕೆಲಸಗಳಿಗಾಗಿ 40 ಪರ್ಸೆಂಟ್ ಕಮಿಷನ್ ಬಗ್ಗೆ ಜನರಿಗೆ ಮನವರಿಕೆ ಮಾಡಲಾಯಿತು. ಬಿಜೆಪಿ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಬಿಜೆಪಿ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಹಿಂದೆ ಬಿಜೆಪಿ ಗೆದ್ದಿದ್ದು ಜನಾದೇಶದಿಂದಲ್ಲ, ಶಾಸಕರಿಗೆ ಹಣದ ಆಮಿಷ ಒಡ್ಡುವ ಆಪರೇಷನ್ ಕಮಲ ಮೂಲಕ ಅಧಿಕಾರಕ್ಕೆ ಬಂದಿದ್ದರು ಎಂದು ತಿಳಿಸಿದ ಮುಖ್ಯಮಂತ್ರಿ,  ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ-ದೇವೇಂದ್ರ ಫಡ್ನವೀಸ್ ಸರ್ಕಾರ ಕೂಡ ಭ್ರಷ್ಟವಾಗಿದೆ ಮತ್ತು ಅವರನ್ನು ಸೋಲಿಸುವುದು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಕೆಲಸವಾಗಿದೆ ಎಂದು ಹೇಳಿದರು. ಮುಂದಿನ ವರ್ಷ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ದೇಶ, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ನಾವೆಲ್ಲರೂ ಮತ್ತೊಂದು ಸ್ವಾತಂತ್ರ್ಯ ಹೋರಾಟವನ್ನು ನಡೆಸಬೇಕಾಗಿದೆ. ನಾನು ಮುಖ್ಯಮಂತ್ರಿಯಾಗಲು ಅಂಬೇಡ್ಕರ್ ಕಾರಣ.  ಬಿಜೆಪಿಯವರು ಧರ್ಮ, ಪ್ರದೇಶ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಜನರನ್ನು ವಿಭಜಿಸುತ್ತಿದ್ದಾರೆ . ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಪ್ರಾರಂಭವಾಗಬೇಕಿದ್ದ ಐದು ಖಾತರಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಕ್ಕೆ ಅಕ್ಕಿ ನೀಡದಂತೆ ಭಾರತೀಯ ಆಹಾರ ನಿಗಮಕ್ಕೆ ಬಿಜೆಪಿ ಹೇಳುತ್ತಿದೆ  ಎಂದು ಸಿದ್ಧರಾಮಯ್ಯ ಆರೋಪಿಸಿದರು.

ಸಂವಿಧಾನವನ್ನು ಬದಲಾಯಿಸಲು ಕಾಂಗ್ರೆಸ್ ಎಂದಿಗೂ ಬಿಡುವುದಿಲ್ಲ ಮತ್ತು ಅದನ್ನು ರಕ್ಷಿಸಲು ಪಕ್ಷದ ಎಲ್ಲಾ ಕಾರ್ಯಕರ್ತರು ಯಾವುದೇ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ಕರೆ ನೀಡಿದ ಸಿದ್ದರಾಮಯ್ಯ, ಸಾಂಗ್ಲಿಯ ಜತ್ ತಾಲೂಕಿನ ನೀರಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ಜನರಿಗೆ ನೀರು ಸಿಗುವಂತೆ ಮಾಡುವುದಾಗಿ  ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com