
ಸೇತುವೆ ಮೇಲೆ ಸೆಲ್ಫಿ ತೆಗೆದುಕೊಳ್ಳುವಾಗ ರೈಲು ಢಿಕ್ಕಿ
ಡೆಹ್ರಾಡೂನ್: ಸೆಲ್ಫಿ ಗೀಳಿಗೆ ಇಬ್ಬರು ಬಲಿಯಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿ ಪಟ್ಟಣದ ರೈಲ್ವೇ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಇಬ್ಬರು ಹದಿಹರೆಯದವರ ಮೇಲೆ ರೈಲು ಹರಿದು ಇಬ್ಬರೂ ಸಾವನ್ನಪ್ಪಿದ್ದಾರೆ. ಶನಿವಾರ ಸಂಜೆ ಈ ಅವಘಡ ಸಂಭವಿಸಿದೆ ಎಂದು ಲಕ್ಸರ್ ಪೊಲೀಸ್ ಠಾಣೆ ಪ್ರಭಾರಿ ಮಮತಾ ಗೋಲಾ ಸೋಮವಾರ ತಿಳಿಸಿದ್ದಾರೆ.
ಇದನ್ನೂ ಓದಿ: ಅಸ್ಸಾಂ ಪ್ರವಾಹ: 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್
ಸಿದ್ಧಾರ್ಥ್ ಸೈನಿ (19) ಮತ್ತು 16 ವರ್ಷದ ಶಿವಂ ಸೈನಿ ಅವರು ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್‌ಪ್ರೆಸ್ ದೋಸ್ನಿ ರೈಲ್ವೆ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ರೈಲು ಡಿಕ್ಕಿ ಹೊಡೆದಿದೆ. ರೈಲು ಢಿಕ್ಕಿ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರೂ ಸೋಲಾನಿ ನದಿಯ ದಡದಲ್ಲಿ ಧಾರ್ಮಿಕ ಆಚರಣೆಯನ್ನು ಮಾಡಲು ತಮ್ಮ ಹಳ್ಳಿಯಿಂದ ತಮ್ಮ ಕುಟುಂಬದೊಂದಿಗೆ ಲಕ್ಸಾರ್‌ಗೆ ಬಂದಿದ್ದರು. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ನದಿಗೆ ಅಡ್ಡಲಾಗಿರುವ ರೈಲ್ವೆ ಸೇತುವೆಯನ್ನು ಏರಿ ಸೆಲ್ಫೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ದೆಹಲಿಗೆ ಹೋಗುವ ರೈಲು ವೇಗವಾಗಿ ಬಂದು ಢಿಕ್ಕಿಯಾಗಿದೆ ಎಂದು ಪೊಲೀಸ್ ಅಧಿಕಾರಿ ಗೋಲಾ ತಿಳಿಸಿದ್ದಾರೆ.