ಸಂಜಯ್ ರಾವುತ್ - ಉದ್ಧವ್ ಠಾಕ್ರೆ (ಪಿಟಿಐ ಚಿತ್ರ)
ಸಂಜಯ್ ರಾವುತ್ - ಉದ್ಧವ್ ಠಾಕ್ರೆ (ಪಿಟಿಐ ಚಿತ್ರ)

ಮಾನನಷ್ಟ ಮೊಕದ್ದಮೆ: ಉದ್ಧವ್ ಠಾಕ್ರೆ, ಸಂಜಯ್ ರಾವತ್‌ಗೆ ಕೋರ್ಟ್ ಸಮನ್ಸ್

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಮ್ಯಾಜಿಸ್ಟ್ರೇಟ್ ಕೋರ್ಟ್ ಶಿವಸೇನೆ-ಯುಬಿಟಿ ನಾಯಕರಾದ ಉದ್ಧವ್ ಠಾಕ್ರೆ ಮತ್ತು ಸಂಜಯ್ ರಾವತ್ ಅವರಿಗೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
Published on

ಮುಂಬೈ: ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಮ್ಯಾಜಿಸ್ಟ್ರೇಟ್ ಕೋರ್ಟ್ ಶಿವಸೇನೆ-ಯುಬಿಟಿ ನಾಯಕರಾದ ಉದ್ಧವ್ ಠಾಕ್ರೆ ಮತ್ತು ಸಂಜಯ್ ರಾವತ್ ಅವರಿಗೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಮಾನಹಾನಿಕರ ಲೇಖನಗಳನ್ನು ಪ್ರಕಟಿಸಲಾಗಿದೆ ಎಂದು ಆರೋಪಿಸಿ ಪ್ರತಿಸ್ಪರ್ಧಿ ಶಿವಸೇನಾ ಬಣದ ನಾಯಕ ರಾಹುಲ್ ಶೆವಾಲೆ ಅವರು ಠಾಕ್ರೆ ಮತ್ತು ರಾವತ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಮುಂಬೈ ದಕ್ಷಿಣ-ಮಧ್ಯ ಕ್ಷೇತ್ರದ ಸಂಸದ ಶೆವಾಲೆ ಅವರ ಅರ್ಜಿ ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ಸ್ವೀರಿ ನ್ಯಾಯಾಲಯ) ಎಸ್‌ಬಿ ಕಾಳೆ ಅವರು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಠಾಕ್ರೆ ಮತ್ತು ರಾಜ್ಯಸಭಾ ಸದಸ್ಯ ರಾವತ್ ಅವರಿಗೆ ಜುಲೈ 14 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣಕ್ಕೆ ಸೇರಿದ ಶೆವಾಲೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500(ಮಾನಹಾನಿಗಾಗಿ ಶಿಕ್ಷೆ) ಮತ್ತು 501(ಮಾನಹಾನಿಕರ ಎಂದು ತಿಳಿದು ಅದನ್ನು ಮುದ್ರಿಸುವುದು) ಅಡಿಯಲ್ಲಿ ಇಬ್ಬರು ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಠಾಕ್ರೆ ಅವರು ಸಾಮ್ನಾದ ಮುಖ್ಯ ಸಂಪಾದಕರಾಗಿದ್ದರೆ, ರಾವತ್ ಅದರ ಕಾರ್ಯನಿರ್ವಾಹಕ ಸಂಪಾದಕರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com