ರಾಜ್ಯಸಭೆಯ 10 ಸ್ಥಾನಗಳಿಗೆ ಜುಲೈ 24 ರಂದು ಚುನಾವಣೆ

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ'ಬ್ರೇನ್ ಅವರು ಸೇರಿದಂತೆ ರಾಜ್ಯಸಭೆಯ 10 ಸದಸ್ಯರು ಜುಲೈ, ಆಗಸ್ಟ್ ನಲ್ಲಿ ನಿವೃತ್ತಿಯಾಗುತ್ತಿದ್ದು, ಆ ಸ್ಥಾನಗಳಿಗೆ ಜುಲೈ 24 ರಂದು ಚುನಾವಣೆ...
ನೂತನ ಸಂಸತ್ ಭವನ
ನೂತನ ಸಂಸತ್ ಭವನ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ'ಬ್ರೇನ್ ಅವರು ಸೇರಿದಂತೆ ರಾಜ್ಯಸಭೆಯ 10 ಸದಸ್ಯರು ಜುಲೈ, ಆಗಸ್ಟ್ ನಲ್ಲಿ ನಿವೃತ್ತಿಯಾಗುತ್ತಿದ್ದು, ಆ ಸ್ಥಾನಗಳಿಗೆ ಜುಲೈ 24 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ(ಇಸಿ) ಮಂಗಳವಾರ ಘೋಷಿಸಿದೆ.

ಸಂಸತ್ತಿನ ಮೇಲ್ಮನೆಯ 10 ಸ್ಥಾನಗಳು ಜುಲೈ ಮತ್ತು ಆಗಸ್ಟ್‌ನಲ್ಲಿ ತೆರವಾಗುತ್ತಿದ್ದು, ಈ ಸ್ಥಾನಗಳಿಗೆ ಜುಲೈ 24 ರಂದು ಸಂಜೆ 5 ಗಂಟೆಗೆ ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮೇಲ್ಮನೆಯ 10 ಸದಸ್ಯರು ಆರು ವರ್ಷಗಳ ತಮ್ಮ ಅವಧಿಯನ್ನು ಪೂರ್ಣಗೊಳಿಸಿದ್ದು, ಜುಲೈ 28 ರಿಂದ ಆಗಸ್ಟ್ 18 ರ ನಡುವೆ ನಿವೃತ್ತರಾಗುತ್ತಿದ್ದಾರೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಗೋವಾದಿಂದ ಒಬ್ಬರು, ಗುಜರಾತ್ ನಿಂದ ಮೂವರು, ಪಶ್ಚಿಮ ಬಂಗಾಳದಿಂದ ಆರು ಸದಸ್ಯರ ಆಯ್ಕೆಗೆ ಜುಲೈ 24 ರಂದು ಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com