ಎಂಕೆ ಸ್ಟಾಲಿನ್ ಏಕೆ ಪ್ರಧಾನಿ ಅಭ್ಯರ್ಥಿಯಾಗಬಾರದು?: ಫಾರೂಕ್ ಅಬ್ದುಲ್ಲಾ

ಚೆನ್ನೈನಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಶ್ರಮಿಸುತ್ತಿರುವ ತಮಿಳುನಾಡು ಆಡಳಿತಾರೂಢ ಡಿಎಂಕೆಯ ಬಗ್ಗೆ ಮಾತನಾಡುತ್ತಾರೆ. 
ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ

ಚೆನ್ನೈ: ಚೆನ್ನೈನಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಶ್ರಮಿಸುತ್ತಿರುವ ತಮಿಳುನಾಡು ಆಡಳಿತಾರೂಢ ಡಿಎಂಕೆಯ ಬಗ್ಗೆ ಮಾತನಾಡುತ್ತಾರೆ. 

ಇದೊಂದು ಅದ್ಭುತ ಆರಂಭ. ಭಾರತದ ಏಕತೆಯನ್ನು ಕಾಪಾಡಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಡಿಎಂಕೆ ಉತ್ತಮ ಕೆಲಸ ಮಾಡುತ್ತಿದೆ. ಭಾರತವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ. ಆದ್ದರಿಂದ, ಅವರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತವನ್ನು ಒಂದುಗೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಸಿಎಂ ಸ್ಟಾಲಿನ್ ಅವರ 70ನೇ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ಫಾರೂಕ್ ಅಬ್ದುಲ್ಲಾ ಅವರು ಪ್ರಸ್ತುತ ಚೆನ್ನೈನಲ್ಲಿದ್ದಾರೆ.

"ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಪ್ರಧಾನಿ ಅಭ್ಯರ್ಥಿಯಾಗಬಹುದೇ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಫಾರೂಕ್ ಅಬ್ದುಲ್ಲಾ, "ಯಾಕೆ ಸಾಧ್ಯವಿಲ್ಲ? ಅವರು ಏಕೆ ಪ್ರಧಾನಿಯಾಗಬಾರದು? ಅದರಲ್ಲಿ ತಪ್ಪೇನು? ಎಂದರು.

"ಮೊದಲು ನಾವೆಲ್ಲರೂ ಒಗ್ಗಟ್ಟಾಗಬೇಕು ಮತ್ತು ಗೆಲ್ಲಬೇಕು. ಗೆದ್ದಾಗ ಈ ರಾಷ್ಟ್ರವನ್ನು ಮುನ್ನಡೆಸಲು ಮತ್ತು ಒಗ್ಗೂಡಿಸಲು ಯಾರು ಉತ್ತಮ ವ್ಯಕ್ತಿ ಎಂದು ನಿರ್ಧರಿಸಲಾಗುತ್ತದೆ" ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com