ಮಹಾರಾಷ್ಟ್ರ ಉಪ ಚುನಾವಣೆ: ಕಸ್ಬಾ ಪೇಠ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು

ಮಹಾರಾಷ್ಟ್ರದ ಕಸ್ಬಾ ಪೇಠ್ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ರವೀಂದ್ರ ಧಾಂಗೇಕರ್ ಶೇ. 51 ರಷ್ಟು ಮತಗಳನ್ನು ಗಳಿಸಿ ಭರ್ಜರಿ ಜಯ ಗಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಸ್ಬಾ ಪೇಠ್: ಮಹಾರಾಷ್ಟ್ರದ ಕಸ್ಬಾ ಪೇಠ್ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ರವೀಂದ್ರ ಧಾಂಗೇಕರ್ ಶೇ. 51 ರಷ್ಟು ಮತಗಳನ್ನು ಗಳಿಸಿ ಭರ್ಜರಿ ಜಯ ಗಳಿಸಿದ್ದಾರೆ.

ರವೀಂದ್ರ ಧಾಂಗೇಕರ್ ಬಿಜೆಪಿ ಅಭ್ಯರ್ಥಿ ಹೇಮಂತ್ ರಸಾನೆ ಅವರಿಗಿಂತ 52,423 ಮತಗಳನ್ನು ಪಡೆದಿದ್ದರೆ ಬಿಜೆಪಿ ಅಭ್ಯರ್ಥಿ 47,419 ಮತಗಳನ್ನು ಪಡೆದಿರುವುದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಧಂಗೇಕರ್‌ಗೆ ಗೆಲುವು ಸಾಧಿಸಿದ್ದು ತಿಳಿದ ಕೂಡಲೇ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಕಾರ್ಯಕರ್ತರು ಮತ ಎಣಿಕೆ ಕೇಂದ್ರದ ಹೊರಗೆ ಸಂಭ್ರಮಾಚರಣೆ ನಡೆಸಿದ್ದಾರೆ.

 ಬಿಜೆಪಿ ಶಾಸಕರಾದ ಮುಕ್ತಾ ತಿಲಕ್ ಅವರ ಮರಣದ ಹಿನ್ನೆಲೆಯಲ್ಲಿ ಕಸ್ಬಾ ಪೇಠ್ ಕ್ಷೇತ್ರಕ್ಕೆ  ಫೆಬ್ರವರಿ 26 ರಂದು ಮತದಾನ ನಡೆದಿತ್ತು.  ಬಿಜೆಪಿ- ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆಯ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಎಂವಿಎ ಮೈತ್ರಿಕೂಟದ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com