ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಖಾತೆ ತೆರೆದ ಕಾಂಗ್ರೆಸ್, ಸಾಗರ್ದಿಘಿಯಲ್ಲಿ 'ಕೈ'ಗೆ ಜಯ

ಕೊನೆಗೂ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಕಾಂಗ್ರೆಸ್ ಖಾತೆ ತೆರೆದಿದ್ದು, ಸಾಗರ್ದಿಘಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇರೊನ್ ಬಿಸ್ವಾಸ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್
ಕಾಂಗ್ರೆಸ್

ಕೋಲ್ಕತಾ: ಕೊನೆಗೂ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಕಾಂಗ್ರೆಸ್ ಖಾತೆ ತೆರೆದಿದ್ದು, ಸಾಗರ್ದಿಘಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇರೊನ್ ಬಿಸ್ವಾಸ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸಾಗರ್ದಿಘಿ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬೇರೊನ್ ಬಿಸ್ವಾಸ್ ಅವರು ತಮ್ಮ ಪ್ರತಿಸ್ಪರ್ಧಿ ಟಿಎಂಸಿಯ ದೇಬಾಶಿಸ್ ಬ್ಯಾನರ್ಜಿ ಅವರ ವಿರುದ್ಧ 22,980 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

16ನೇ ಸುತ್ತಿನ ಮತ ಎಣಿಕೆಯ ನಂತರ, ಎಡಪಕ್ಷಗಳ ಬೆಂಬಲ ಹೊಂದಿರುವ ಬಿಸ್ವಾಸ್ ಅವರು 87,667 ಮತಗಳನ್ನು ಗಳಿಸಿದ್ದಾರೆ ಎಂದು ಚುನಾವಣಾ ಆಯೋಗದ(EC) ವೆಬ್‌ಸೈಟ್ ತಿಳಿಸಿದೆ.

ಟಿಎಂಸಿಯ ದೇಬಾಶಿಶ್ ಬ್ಯಾನರ್ಜಿ 64,681 ಮತಗಳನ್ನು ಗಳಿಸಿದರೆ, ಬಿಜೆಪಿಯ ದಿಲೀಪ್ ಸಹಾ 25,815 ಮತಗಳನ್ನು ಪಡೆದಿದ್ದಾರೆ ಎಂದು ಇಸಿ ವೆಬ್‌ಸೈಟ್ ಮಾಹಿತಿ ನೀಡಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಜ್ಯ ಸಚಿವ ಸುಬ್ರತಾ ಸಹಾ ಅವರ ನಿಧನದ ನಂತರ ಅವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com