ಅದಾನಿ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ; ಮೋದಿ ಸರ್ಕಾರಕ್ಕೆ ಕಪಾಳಮೋಕ್ಷ: ಎಎಪಿ

ಇತ್ತೀಚಿಗೆ ಅದಾನಿ ಗ್ರೂಪ್ ಷೇರುಗಳ ಕುಸಿತ ಸೇರಿದಂತೆ ಷೇರು ಮಾರುಕಟ್ಟೆಯ ವಿವಿಧ ನಿಯಂತ್ರಕ ಅಂಶಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ...
ಗೌತಮ್ ಅದಾನಿ
ಗೌತಮ್ ಅದಾನಿ

ನವದೆಹಲಿ: ಇತ್ತೀಚಿಗೆ ಅದಾನಿ ಗ್ರೂಪ್ ಷೇರುಗಳ ಕುಸಿತ ಸೇರಿದಂತೆ ಷೇರು ಮಾರುಕಟ್ಟೆಯ ವಿವಿಧ ನಿಯಂತ್ರಕ ಅಂಶಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದ್ದು, ಇದು ಮೋದಿ ಸರ್ಕಾರಕ್ಕೆ "ದೊಡ್ಡ ಕಪಾಳಮೋಕ್ಷ" ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

ಇಂದು ಮೋದಿ ಸರ್ಕಾರ ಭ್ರಷ್ಟ ಮತ್ತು ನಿಷ್ಪ್ರಯೋಜಕ ಎಂಬುದು ಸಾಬೀತಾಗಿದೆ ಎಂದು ಎಎಪಿ ರಾಷ್ಟ್ರೀಯ ವಕ್ತಾರ ಸಂಜಯ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಅದಾನಿ ಗ್ರೂಪ್ ಹಾಗೂ ಹಿಂಡೆನ್‌ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್, ತನ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ  ನೇತೃತ್ವದಲ್ಲಿ ಸಮಿತಿ ರಚಿಸಿದೆ. 

ಸುಪ್ರೀಂ ಕೋರ್ಟ್ ಆದೇಶಕ್ಕೆ ಪ್ರತಿಕ್ರಿಯಿಸಿದ ಎಎಪಿ ನಾಯಕ, "ಇದರಿಂದ ಮೋದಿ ಸರ್ಕಾರ ಕಪಾಳಮೋಕ್ಷ ಮಾಡಿದಂತಾಗಿದೆ. ಅದಾನಿಯನ್ನು ಉಳಿಸಲು ಮೋದಿ ಯಾವ ಹಂತಕ್ಕೂ ಬೇಕಾದರೂ ಹೋಗಬಹುದು ಎಂದರು.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಆದರೆ ಮೋದಿ ಸರ್ಕಾರ ಅದನ್ನು ಸ್ಪಷ್ಟವಾಗಿ ತಿರಸ್ಕರಿಸಿದೆ. ಹೀಗಾಗಿ ದೇಶದ ಸುಪ್ರೀಂ ಕೋರ್ಟ್ ಅಂತಿಮವಾಗಿ ಮಧ್ಯಪ್ರವೇಶಿಸಬೇಕಾಯಿತು ಎಂದು ಸಿಂಗ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com