ತ್ರಿಪುರಾ, ನಾಗಾಲ್ಯಾಂಡ್ ಮತದಾರರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ತ್ರಿಪುರಾ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುತ್ತಿದ್ದು, ಪಕ್ಷದ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಎರಡೂ ರಾಜ್ಯಗಳ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ತ್ರಿಪುರಾ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುತ್ತಿದ್ದು, ಪಕ್ಷದ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಎರಡೂ ರಾಜ್ಯಗಳ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

"ಧನ್ಯವಾದಗಳು ತ್ರಿಪುರಾ! ಇದು ಪ್ರಗತಿ ಮತ್ತು ಸ್ಥಿರತೆಯ ಮತವಾಗಿದೆ. ಬಿಜೆಪಿ ತ್ರಿಪುರಾ ರಾಜ್ಯದ ಅಭಿವೃದ್ಧಿಯ ಪಥವನ್ನು ಮುಂದುವರಿಸುತ್ತದೆ. ತಳಮಟ್ಟದಲ್ಲಿ ಅದ್ಭುತವಾಗಿ ಕೆಲಸ ಮಾಡಿದ ತ್ರಿಪುರಾ ಬಿಜೆಪಿ ಕಾರ್ಯಕರ್ತರ ಬಗ್ಗೆ ನನಗೆ ಹೆಮ್ಮೆ ಇದೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನಾಗಾಲ್ಯಾಂಡ್ ಕಾರ್ಯಕರ್ತರಿಗೂ ಧನ್ಯವಾದ ಹೇಳಿದ ಪ್ರಧಾನಿ, ಎನ್ ಡಿಪಿಪಿ ಮತ್ತು ಬಿಜೆಪಿ ಮೈತ್ರಿಕೂಟಕ್ಕೆ ರಾಜ್ಯದಲ್ಲಿ ಸೇವೆ ಸಲ್ಲಿಸಲು ಮತ್ತೊಮ್ಮೆ ಜನಾದೇಶದೊಂದಿಗೆ ಆಶೀರ್ವದಿಸಿದ ನಾಗಾಲ್ಯಾಂಡ್ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಡಬಲ್ ಇಂಜಿನ್ ಸರ್ಕಾರ ರಾಜ್ಯದ ಪ್ರಗತಿಗೆ ಶ್ರಮಿಸುತ್ತದೆ. ಈ ಫಲಿತಾಂಶವನ್ನು ಖಚಿತಪಡಿಸಿದ ನಮ್ಮ ಪಕ್ಷದ ಕಾರ್ಯಕರ್ತರ ಕಠಿಣ ಪರಿಶ್ರಮವನ್ನು ನಾನು ಶ್ಲಾಘಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಆಡಳಿತಾರೂಢ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ ಗುರುವಾರ 33 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇನ್ನು 60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಯಲ್ಲಿ ಬಿಜೆಪಿ-ಐಪಿಎಫ್‌ಟಿ ಮೈತ್ರಿಕೂಟ 32 ಸ್ಥಾನಗಳನ್ನು ಗೆದ್ದು ಸತತ ಎರಡನೇ ಬಾರಿಗೆ ಈಶಾನ್ಯ ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com