ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಕೆ: 6 ಎಎಪಿ ಮುಖಂಡರ ಬಂಧನ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ, ಬೆದರಿಕೆ ಮತ್ತು ಅವರ ಪ್ರತಿಕೃತಿ ದಹಿಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 6 ಮುಖಂಡರನ್ನು ಬಂಧಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Published: 03rd March 2023 01:46 PM | Last Updated: 03rd March 2023 01:46 PM | A+A A-

ಸಾಂದರ್ಭಿಕ ಚಿತ್ರ
ಬಾಲಿಯಾ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ, ಬೆದರಿಕೆ ಮತ್ತು ಅವರ ಪ್ರತಿಕೃತಿ ದಹಿಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 6 ಮುಖಂಡರನ್ನು ಬಂಧಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಠಾಣಾಧಿಕಾರಿ ರಾಜ್ ಕುಮಾರ್ ಸಿಂಗ್ ನೀಡಿದ ದೂರಿನ ಆಧಾರದ ಮೇಲೆ ಜಿಲ್ಲೆಯ ಗದ್ವಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆರೋಪಿಗಳು ಗುರುವಾರ ರತ್ಸಾದ್ ಪಟ್ಟಣದ ಗಾಂಧಿ ಆಶ್ರಮ ಬಳಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಬಂಧನವನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ, ಸಿಬಿಐ ಮತ್ತು ಇಡಿ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದರು. ಅಲ್ಲದೇ ಬೆದರಿಕೆ ಹಾಕಿ, ಮೋದಿ ಪ್ರತಿಕೃತಿಯನ್ನು ಸುಟ್ಟುಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸ್ಥಳದಲ್ಲಿಯೇ ಆರೋಪಿಗಳನ್ನು ಹಿಡಿಯಲು ಪ್ರಯತ್ನಿಸಿದ್ದೇವು ಆದರೆ, ಅವರು ಪಲಾಯನವಾಗುವಲ್ಲಿ ಯಶಸ್ವಿಯಾಗಿದ್ದರು, ಅವರನ್ನು ಸೆರೆ ಹಿಡಿಯಲು ಪ್ರಯತ್ನಿಸಲಾಗುತಿತ್ತು ಎಂದು ಪೊಲೀಸರು ಹೇಳಿದ್ದಾರೆ,