ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಒಪ್ಪಿಗೆ ಕುರಿತ ಅರ್ಜಿ ವಿಚಾರಣೆ; ವಿಶೇಷ ಪೀಠ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮುಂದು
ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ (Hijab) ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿ ಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
Published: 03rd March 2023 01:49 PM | Last Updated: 03rd March 2023 07:03 PM | A+A A-

ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು ಮತ್ತು ಸುಪ್ರೀಂ ಕೋರ್ಟ್ ನ ಸಂಗ್ರಹ ಚಿತ್ರ
ನವದೆಹಲಿ: ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ (Hijab) ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿ ಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಯನ್ನು ಆಲಿಸಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಭರವಸೆ ನೀಡಿದ್ದಾರೆ.
ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದ ಮಂಡಿಸಿದ ಮಹಿಳಾ ವಕೀಲ ಶದನ್ ಫರಾಸತ್ ಅವರು, 'ಪರೀಕ್ಷೆಗಳು ನಡೆಯುತ್ತಿರುವುದರಿಂದ ಹೆಣ್ಣುಮಕ್ಕಳು ಇನ್ನೊಂದು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.. ಹೀಗಾಗಿ ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿದರು. ಈ ವಾದವನ್ನು ಆಲಿಸಿಸಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು "ನಾವು ಇದಕ್ಕಾಗಿ ವಿಶೇಷ ಪೀಠವನ್ನು ರಚಿಸುತ್ತೇವೆ" ಎಂದು ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಅರ್ಜಿ: ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನ
ಆರಂಭದಲ್ಲಿ, ಸಿಜೆಐ ಈ ವಿಷಯವನ್ನು ಹೋಳಿ ರಜೆಯ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಐದು ದಿನಗಳ ನಂತರ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ, "ಅವರು ಒಂದು ವರ್ಷ ತಪ್ಪಿಸಿಕೊಂಡಿದ್ದಾರೆ, ವಿಚಾರಣೆ ವಿಳಂಬವಾದರ ಮತ್ತೊಂದು ವರ್ಷ ಪರೀಕ್ಷೆ ತಪ್ಪಿಸಿಕೊಳ್ಳುತ್ತಾರೆ ಎಂದು ವಕೀಲರು ವಾದ ಮಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಡಿ.ವೈ ಚಂದ್ರಚೂಡ್, ನೀವೂ ಕೊನೆ ಕ್ಷಣದಲ್ಲಿ ಬಂದು ಮನವಿ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರ ನೀಡಿದ ವಕೀಲರು ಕಳೆದ 10 ದಿನಗಳಲ್ಲಿ ಎರಡು ಬಾರಿ ಈ ಬಗ್ಗೆ ಪ್ರಸ್ತಾಪಿಸಿದೆ. ಅದಾಗ್ಯೂ ನ್ಯಾಯಾಲಯ ಪೀಠವನ್ನು ರಚನೆ ಮಾಡಿಲ್ಲ ಎಂದರು. ಬಳಿಕ ಸಿಜೆಐ ಶೀಘ್ರದಲ್ಲಿ ತ್ರಿ ಸದಸ್ಯ ಪೀಠ ರಚಿಸಿ ವಿಚಾರಣೆ ನಡೆಸುವುದಾಗಿ ಹೇಳಿದರು.
ಇದನ್ನೂ ಓದಿ: ಹಿಜಾಬ್ ನಿಷೇಧ ವಿವಾದ: ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಲು ಸುಪ್ರೀಂ ಕೋರ್ಟ್ ಪರಿಗಣನೆ
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠವು, ಹಿಜಬ್ ಧರಿಸುವುದನ್ನ ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜುಗಳಿಗೆ ಪರಿಣಾಮಕಾರಿಯಾಗಿ ಅಧಿಕಾರ ನೀಡಿ ಸರ್ಕಾರ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ವಿಭಜಿತ ತೀರ್ಪು ನೀಡಿತ್ತು. ಇದಕ್ಕೂ ಮುನ್ನ ರಾಜ್ಯ ಹೈಕೋರ್ಟ್, ಸರ್ಕಾರದ ನಿರ್ಧಾರ ಪರ ತೀರ್ಪು ನೀಡಿತ್ತು.
ಮಾರ್ಚ್ 15, 2022 ರಂದು, ಕರ್ನಾಟಕದ ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ಒಂದು ವಿಭಾಗವು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು, ಇದು ಅಗತ್ಯ ಧಾರ್ಮಿಕ ಭಾಗವಲ್ಲ.. ಇಸ್ಲಾಮಿಕ್ ನಂಬಿಕೆಯಲ್ಲಿ ಅಭ್ಯಾಸ ಎಂದು ತೀರ್ಪು ನೀಡಿತು.