ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವೈದ್ಯರು ಶುಕ್ರವಾರ ತಿಳಿಸಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವೈದ್ಯರು ಶುಕ್ರವಾರ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಆರೋಗ್ಯ ಬುಲೆಟಿನ್ ತಿಳಿಸಿದೆ.

ಸೋನಿಯಾ ಗಾಂಧಿ ಅವರು ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. 

ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ವೈದ್ಯ ಅರೂಪ್ ಬಸು ಮತ್ತು ಅವರ ತಂಡ ಸೋನಿಯಾ ಗಾಂಧಿ ಅವರ ಆರೋಗ್ಯದ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಟ್ರಸ್ಟ್ ಸೊಸೈಟಿಯ ಅಧ್ಯಕ್ಷ ಡಿ ಎಸ್ ರಾಣಾ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com