ಹರಿಯಾಣದಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ, ಎಂಟು ಮಂದಿ ಸಾವು

ಹರಿಯಾಣದ ಅಂಬಾಲ ಜಿಲ್ಲೆಯ ಕಕ್ಕರ್ ಮಜ್ರಾ ಗ್ರಾಮದ ಬಳಿ ಶುಕ್ರವಾರ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಂಬಾಲ: ಹರಿಯಾಣದ ಅಂಬಾಲ ಜಿಲ್ಲೆಯ ಕಕ್ಕರ್ ಮಜ್ರಾ ಗ್ರಾಮದ ಬಳಿ ಶುಕ್ರವಾರ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಚಕುಲ-ಯಮುನಾನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು, ಉತ್ತರ ಪ್ರದೇಶದ ಬರೇಲಿಯಿಂದ ಹಿಮಾಚಲ ಪ್ರದೇಶದ ಬಡ್ಡಿಗೆ ತೆರಳುತ್ತಿದ್ದ ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದಿದೆ.

ಕಕ್ಕರ್ ಮಜ್ರಾದಲ್ಲಿ ಮೂವರು ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್‌ ಗೆ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಅಂಬಾಲಾ ಸಿಟಿ ಮತ್ತು ನಾರೈಂಗರ್‌ನಲ್ಲಿರುವ ಸಿವಿಲ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದವರಲ್ಲಿ ಹೆಚ್ಚಿನವರು ನಿರ್ಮಾಣ ಕಾರ್ಯಗಳಲ್ಲಿ ತೊಡಗಿರುವ ವಲಸೆ ಕಾರ್ಮಿಕರು ಎಂದು ಪೊಲೀಸರು ಹೇಳಿದ್ದಾರೆ.

ಮೃತರು ಮತ್ತು ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಬಸ್‌ನಿಂದ ಹೊರತೆಗೆಯಲಾಗಿದೆ ಮತ್ತು ಟ್ರಕ್ ಚಾಲಕನನ್ನು ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com