ಕೋವಿಡ್-19: 97 ದಿನಗಳ ಬಳಿಕ ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನ 300ಕ್ಕೂ ಅಧಿಕ ಸೋಂಕು ಪ್ರಕರಣ ವರದಿ

ಸಂಪೂರ್ಣ ಕ್ಷೀಣವಾಗಿದ್ದ ಮಾರಕ ಕೋವಿಡ್ ಸೋಂಕು 97 ದಿನಗಳ ಬಳಿಕ ಮತ್ತೆ ಭಾರತದಲ್ಲಿ ಸುದ್ದಿಗೆ ಗ್ರಾಸವಾಗಿದ್ದು, ಕಳೆದ 24 ಗಂಟೆಗಳಲ್ಲಿ 300ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಸಂಪೂರ್ಣ ಕ್ಷೀಣವಾಗಿದ್ದ ಮಾರಕ ಕೋವಿಡ್ ಸೋಂಕು 97 ದಿನಗಳ ಬಳಿಕ ಮತ್ತೆ ಭಾರತದಲ್ಲಿ ಸುದ್ದಿಗೆ ಗ್ರಾಸವಾಗಿದ್ದು, ಕಳೆದ 24 ಗಂಟೆಗಳಲ್ಲಿ 300ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ.

ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ದೈನಂದಿನ ಕೋವಿಡ್ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 334 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,686ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಅಂತೆಯೇ ಇದೇ ಅವಧಿಯಲ್ಲಿ ಮೂರು ಕೋವಿಡ್ ಸಾವುಗಳು ದಾಖಲಾಗಿದ್ದು, 2 ಮಹಾರಾಷ್ಟ್ರದಲ್ಲಿ ಮತ್ತು ಒಂದು ಕೇರಳದಲ್ಲಿ ವರದಿಯಾಗಿದೆ. ಆ ಮೂಲಕ ಕೋವಿಡ್ ಗೆ  ಬಲಿಯಾದವರ ಸಂಖ್ಯೆ 5,30,775ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 4,46,87,496ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.80ರಷ್ಟಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com